ಧರ್ಮಸ್ಥಳ ಶವ ಹೂತಿರುವ ಪ್ರಕರಣ : ಪತ್ತೆಯಾಗದ ಕುರುಹು
ಮಂಗಳೂರು, 30 ಜುಲೈ (ಹಿ.ಸ.) : ಆ್ಯಂಕರ್ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಅನಾಮಧೇಯ ವ್ಯಕ್ತಿಯೋರ್ವ ತಾನು ಹಲವಾರು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿಕೆ ಆಧರಿಸಿ ಎಸ್ಐಟಿ ನಡೆಸುತ್ತಿರುವ ತನಿಖೆ ಮುಂದುವರೆದಿದ್ದು, ಆತ ಗುರುತಿಸಿದ ಸ್ಥಳದಲ್ಲಿ ಉತ್ಖನನ
Dharmstal


ಮಂಗಳೂರು, 30 ಜುಲೈ (ಹಿ.ಸ.) :

ಆ್ಯಂಕರ್ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಅನಾಮಧೇಯ ವ್ಯಕ್ತಿಯೋರ್ವ ತಾನು ಹಲವಾರು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿಕೆ ಆಧರಿಸಿ ಎಸ್ಐಟಿ ನಡೆಸುತ್ತಿರುವ ತನಿಖೆ ಮುಂದುವರೆದಿದ್ದು, ಆತ ಗುರುತಿಸಿದ ಸ್ಥಳದಲ್ಲಿ ಉತ್ಖನನ ಕಾರ್ಯ ಎರಡನೇ ದಿನವಾದ ಇಂದು ನಡೆಯಿತು.

ಸೋಮವಾರ ವಿಶೇಷ ತನಿಖಾ ತಂಡದ ಅಧಿಕಾರಿಗಳ ಸಮ್ಮುಖದಲ್ಲಿ ಅನಾಮಧೇಯ ವ್ಯಕ್ತಿ 13 ಸ್ಥಳಗಳನ್ನು ಗುರುತಿಸಿದ್ದನು. ಆ ಸ್ಥಳಕ್ಕೆ ಗುರುತು ಮಾಡಲಾಗಿದ್ದು, ಪೊಲೀಸ್ ಭದ್ರತೆ ನೀಡಲಾಗಿದೆ.

ಮಂಗಳವಾರ ದೂರುದಾರ ಮೊದಲು ಗುರುತು ಮಾಡಿದ ಸ್ಥಳದಲ್ಲಿ ಕಾರ್ಮಿಕರಿಂದ ಉತ್ಖನನ ನಡೆಸಲಾಗಿತ್ತು. ಆದರೆ ಈ ಸ್ಥಳದಲ್ಲಿ ಯಾವುದೇ ಅಸ್ಥಿಪಂಜರ ಪತ್ತೆಯಾಗದಿರುವ ಹಿನ್ನೆಲೆಯಲ್ಲಿ ಉಳಿದ ಸ್ಥಳಗಳಲ್ಲಿ ಕಾರ್ಯಾಚರಣೆಯನ್ನು ಇಂದೂ ಮುಂದುವರಿಸಲಾಯಿತು.

ಇಂದು ಸಾಕ್ಷಿ ದೂರುದಾರನೊಂದಿಗೆ ಎಸ್‌​ಐಟಿ ತಂಡ ನೇತ್ರಾವತಿ ಸ್ನಾನಘಟ್ಟಕ್ಕೆ ಆಗಮಿಸಿ ಉತ್ಖನನ ಕಾರ್ಯ ನಡೆಸಿತು. ಇಂದು ನಾಲ್ಕು ಸ್ಥಳಗಳಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಯಾವುದೇ ಕುರುಹುಗಳು ಪತ್ತೆಯಾಗದಿರುವ ಹಿನ್ನೆಲೆಯಲ್ಲಿ ಇಂದಿನ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.

ಎಸ್​​ಐಟಿ ತಂಡದ ಮುಖ್ಯಸ್ಥ ಪ್ರಣಬ್ ಮೊಹಾಂತಿ‌ ಇಂದು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಅಧಿಕಾರಿಗಳಾದ ಅನುಚೇತ್, ಜಿತೇಂದ್ರ ಕುಮಾರ್ ದಯಾಮ, ಎಸ್​ಪಿ ಸೈಮನ್, ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಮಂಗಳೂರು ಕೆ.ಎಮ್.ಸಿ ವೈದ್ಯರ ತಂಡ, ಎಫ್ಎಸ್ಎಲ್ ತಂಡ, ಐಎಸ್​ಡಿ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande