ನಿರಂತರ ಮಳೆ ; ಚಿಕ್ಕಮಗಳೂರು ಶಾಲೆಗಳಿಗೆ ರಜೆ ಘೋಷಣೆ
ಚಿಕ್ಕಮಗಳೂರು, 04 ಜುಲೈ (ಹಿ.ಸ.) : ಆ್ಯಂಕರ್ : ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರ ಮಳೆ ಮುಂದುವರೆದಿದ್ದು, ತುಂಗಾ ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮಲೆನಾಡಲ್ಲಿ ಗಾಳಿ - ಮಳೆ ಅಬ್ಬರ ಹಿನ್ನೆಲೆಯಲ್ಲಿ ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ ರಜ
ನಿರಂತರ ಮಳೆ ; ಚಿಕ್ಕಮಗಳೂರು ಶಾಲೆಗಳಿಗೆ ರಜೆ ಘೋಷಣೆ


ಚಿಕ್ಕಮಗಳೂರು, 04 ಜುಲೈ (ಹಿ.ಸ.) :

ಆ್ಯಂಕರ್ : ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರ ಮಳೆ ಮುಂದುವರೆದಿದ್ದು, ತುಂಗಾ ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮಲೆನಾಡಲ್ಲಿ ಗಾಳಿ - ಮಳೆ ಅಬ್ಬರ ಹಿನ್ನೆಲೆಯಲ್ಲಿ ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಹಾಗೂ ಮೂಡಿಗೆರೆ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ತಾಲೂಕುಗಳು ಸೇರಿದಂತೆ ಗುಡ್ಡಗಾಡು ಪ್ರದೇಶ ಹಾಗೂ ಘಟ್ಟ ಪ್ರದೇಶಗಳಲ್ಲಿಯೂ ನಿರಂತರವಾಗಿ ಮಳೆ ಸುರಿಯುತ್ತಿದೆ. ಇದರಿಂದ ಜಿಲ್ಲೆಯ ಭಾಗದಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯವಾಗಿದ್ದು, ರಸ್ತೆ ಸಂಚಾರದಲ್ಲಿ ಅಡಚಣೆ ಉಂಟಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande