ಬೆಂಗಳೂರು, 04 ಜುಲೈ (ಹಿ.ಸ.) :
ಆ್ಯಂಕರ್ : ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಮುಂದುವರೆದಿದ್ದು ಈ ಭಾಗದ 8 ಜಿಲ್ಲೆಗಳಲ್ಲಿ ಶನಿವಾರದವರೆಗೂ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಹಾಗೂ ಬೆಳಗಾವಿ ಜಿಲ್ಲೆಗಳಿಗೆ ಕಿತ್ತಳೆ ಎಚ್ಚರಿಕೆ ನೀಡಲಾಗಿದೆ.
ಧಾರವಾಡ, ಗದಗ, ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದ್ದು, ದಕ್ಷಿಣ ಒಳನಾಡಿನ ಹಳೆ ಮೈಸೂರು ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಕೆಲ ಪ್ರದೇಶಗಳಲ್ಲಿ ಮಾತ್ರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa