ನವದೆಹಲಿ, 4 ಜುಲೈ (ಹಿ.ಸ.) :
ಆ್ಯಂಕರ್ : ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರಿಂದ ಬಿಜೆಪಿ–ಕಾಂಗ್ರೆಸ್ ನಡುವೆ ಗುಪ್ತ ಸಂಬಂಧವಿದೆ ಎಂಬ ಆರೋಪಕ್ಕೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಪ್ರತಿಕ್ರಿಯೆ ನೀಡಿದ್ದಾರೆ.
ನಿಜವಾದ ಗುಪ್ತ ಮೈತ್ರಿ ಕಾಂಗ್ರೆಸ್ ಮತ್ತು ಆಪ್ ನಡುವೆ ಇದೆ ಎಂದು ಚುಗ್ ಆರೋಪಿಸಿದ್ದಾರೆ. 2013 ರಲ್ಲಿ ಕೇಜ್ರಿವಾಲ್ ಅವರು ಕಾಂಗ್ರೆಸ್ ಜೊತೆಗೆ ಅನೈತಿಕ ಮೈತ್ರಿ ಮಾಡಿಕೊಂಡಿದ್ದಾರೆ ಎಂಬುದು ದೇಶದ ಜನತೆಗೆ ಗೊತ್ತಿದೆ. ಕೇಜ್ರಿವಾಲ್ ರಾಜಕೀಯವು ಸುಳ್ಳು, ಬೂಟಾಟಿಕೆ ಮತ್ತು ಮುರಿದ ಪ್ರತಿಜ್ಞೆಗಳನ್ನು ಆಧರಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa