ಕನಕಪುರ, 06 ಜುಲೈ (ಹಿ.ಸ.) :
ಆ್ಯಂಕರ್ : ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಸಿದ್ದೇಶ್ವರಸ್ವಾಮಿ ಬೆಟ್ಟದಲ್ಲಿ ಮೆಟ್ಟಿಲುಗಳ ಉದ್ಘಾಟನೆ ಹಾಗೂ ಧರ್ಮಜಾಗೃತಿ ಸಮಾರಂಭದಲ್ಲಿ ಶ್ರೀಮದ್ ರಂಬಾಪುರಿ ಶ್ರೀಗಳಿಂದ ಆಶೀರ್ವಾದ ಪಡೆದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ ಧರ್ಮ ದೇವರನ್ನು ಮರೆಯದಿರಿ ಎಂದರು.
ಶ್ರೀಮದ್ರಂಭಾಪುರಿ ವೀರಗಂಗಾಧರಜ್ಜಯ್ಯನವರು ‘ಧರ್ಮದಿಂದಲೇ ಶಾಂತಿ ವಿಶ್ವಕ್ಕೆ; ಧರ್ಮಕ್ಕೆ ಜಯವಾಗಲಿ. ನಾಡು ಧರ್ಮ ಸಾಮ್ರಾಜ್ಯವಾಗಲಿ; ಭಕ್ತಿಯುತ ಬೀಡಾಗಲಿ. ಧರ್ಮಕ್ಕಾಗಿ ಏಳಿರಿ, ಧರ್ಮಕ್ಕಾಗಿ ಬಾಳಿರಿ; ಧರ್ಮಕ್ಕಾಗಿ ತಾಳಿರಿ’ ಎಂಬ ಅದ್ಭುತ ಸಂದೇಶ ಸಾರಿದ್ದಾರೆ.
ಧರ್ಮ- ದೇವರನ್ನು ನಾವು ಎಂದಿಗೂ ಮರೆಯಬಾರದು. ಹಿರಿಯರು ‘ಮನೆ ಹುಷಾರು, ಮಠ ಹುಷಾರು’ ಎಂದಿದ್ದಾರೆ. ತಾಯಿ- ತಂದೆ- ಗುರು ಸಮಾಜದ ಮೂರು ಕಣ್ಣುಗಳು. ಹುಟ್ಟುವಾಗ ಯಾರೂ ಇದೇ ಧರ್ಮದಲ್ಲಿ ಹುಟ್ಟಬೇಕೆಂದು ಅರ್ಜಿ ಹಾಕಿಕೊಂಡು ಹುಟ್ಟುವುದಿಲ್ಲ. ‘ಧರ್ಮ ಯಾವುದಾದರೂ ತತ್ವ ಒಂದೇ, ನಾಮ ನೂರಾದರೂ ದೈವ ಒಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ, ಕರ್ಮ ಹಲವಾದರೂ ನಿಷ್ಠೆ ಒಂದೇ, ದೇವನೊಬ್ಬ ನಾಮ ಹಲವು’. ಹೀಗಾಗಿ ಗುರುಗಳು ಹಾಕಿಕೊಟ್ಟ ಧರ್ಮದ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕು ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa