ಜುಲೈ 3ನೇ ವಾರದಲ್ಲಿ 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ
ರಾಯಚೂರು, 08 ಜುಲೈ (ಹಿ.ಸ.) : ಆ್ಯಂಕರ್ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್), ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸಿದ ಎಲ್ಲಾ ವರ್ಗದ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳಿಗೆ
ಜುಲೈ 3ನೇ ವಾರದಲ್ಲಿ 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ


ರಾಯಚೂರು, 08 ಜುಲೈ (ಹಿ.ಸ.) :

ಆ್ಯಂಕರ್ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್), ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸಿದ ಎಲ್ಲಾ ವರ್ಗದ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳಿಗೆ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ರಾಯಚೂರಿನಲ್ಲಿ 2025ರ ಜುಲೈ 3 ನೇ ವಾರದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಜಿಲ್ಲೆಯ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಉದ್ಯಮಶೀಲತೆಯ ಗುಣಲಕ್ಷಣಗಳು ಸ್ವಂತ ಉದ್ಯೋಗ ಸ್ಥಾಪಿಸಲು ಸರ್ಕಾರದ ಯೋಜನೆಗಳು, ಬ್ಯಾಂಕಿನ ವ್ಯವಹಾರ ಮತ್ತು ಸಾಲ ಸೌಲಭ್ಯಗಳ ಮಾಹಿತಿ ಹಾಗೂ ಸ್ವಯಂ ಉದ್ಯಮಗಳನ್ನು ಸ್ಥಾಪಿಸಲು ಇತ್ಯಾದಿ ವಿಷಯಗಳ ಕುರಿತು ಮಾಹಿತಿಯನ್ನು ನೀಡಲಾಗುವುದು.

ಅಭ್ಯರ್ಥಿಗಳು 18 ವರ್ಷ ದಿಂದ 40 ವರ್ಷ ವಯಸ್ಸಿನವರಾಗಿರಬೇಕು. ಕನಿಷ್ಠ 8 ತರಗತಿ ಓದಿರುವ ಅಭ್ಯರ್ಥಿಗಳು ಜುಲೈ 21 ರೊಳಗಾಗಿ ಮೋಬೈಲ್ ಸಂಖ್ಯೆ: 9986600631, 9986332736ಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಅಥವಾ ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ನವೀನ ಆಸ್ಪತ್ರೆ ಪಕ್ಕದಲ್ಲಿ ರಾಯಚೂರು ಇಲ್ಲಿಗೆ ಬಂದು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande