ಕೊಪ್ಪಳ, 08 ಜುಲೈ (ಹಿ.ಸ.) :
ಆ್ಯಂಕರ್ : ಕೊಪ್ಪಳ ವಿಶ್ವವಿದ್ಯಾಲಯವು ಜೂನ್ ತಿಂಗಳಿನಲ್ಲಿ ನಡೆಸಿದ್ದ ಬಿ.ಇಡಿ ಪ್ರಥಮ ಹಾಗೂ ತೃತೀಯ ಸೆಮಿಸ್ಟರ್‍ನ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಶ್ರೀಗವಿಸಿದ್ಧೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪರೀಕ್ಷೆಗೆ ಹಾಜರಾಗಿದ್ದ ಪ್ರಥಮ ಸೆಮಿಸ್ಟರ್‍ನ 94 ವಿದ್ಯಾರ್ಥಿಗಳಿಗೆ 94 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ಉತ್ತೀರ್ಣರಾಗಿರುತ್ತಾರೆ.
600 ಅಂಕಗಳಿಗೆ 555 (92.5%), ಕು.ಸುಷ್ಮಾ ಮಠದ, ಮಹಾವಿದ್ಯಾಲಯಕ್ಕೆ ಪ್ರಥಮ ಸ್ಥಾನವನ್ನು, 553 (92.17%), ಕು, ಪಾವನಿ ಯನ್ನಿ ದ್ವಿತೀಯ ಸ್ಥಾನವನ್ನು ಹಾಗೂ 552 (92.00%), ಶ್ರೀಮತಿ ಪಾಟೀಲ್ ಸುಬಾಷಿನಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ.
ಬಿ.ಇಡಿ. ತೃತೀಯ ಸೆಮಿಸ್ಟರ್‍ನ 98 ವಿದ್ಯಾರ್ಥಿಗಳಿಗೆ 96 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ಉತ್ತೀರ್ಣರಾಗಿರುತ್ತಾರೆ. 600 ಅಂಕಗಳಿಗೆ 562 (93.70%), ಕು. ಆಯಿಷಾ, ಮಹಾವಿದ್ಯಾಲಯಕ್ಕೆ ಪ್ರಥಮ ಸ್ಥಾನವನ್ನು, 556 (92.72%), ಕು, ಅಕ್ಷತಾ ಟಿ. ದ್ವಿತೀಯ ಸ್ಥಾನವನ್ನು ಹಾಗೂ 555 (92.50%), ಕು. ಸಂಜನಾ ಪತ್ತಾರ ತೃತೀಯ ಸ್ಥಾನವನ್ನು ಪಡೆದಿದ್ದಾರೆ.
ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳನ್ನು ಪೂಜ್ಯ ಶ್ರೀಗಳು, ಆಡಳಿತ ಮಂಡಳಿಯ ಕಾರ್ಯದರ್ಶಿಗಳು, ಆಡಳಿತಾಧಿಕಾರಿಗಳು ಸದಸ್ಯರು, ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಸಿಬ್ಬಂದಿವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್