ಕೋಲಾರ, ೦೮ ಜುಲೈ (ಹಿ ಸ) :
ಆ್ಯಂಕರ್ : ಕೋಲಾರ ಜಿಲ್ಲೆಯ ನಗರಸಭೆ ಪುರಸಭೆ ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ ಭಾಗದಲ್ಲಿಯೂ ಸಾರ್ವಜನಿಕರು ಕಸವನ್ನು ಎಲ್ಲೆಂದರಲ್ಲಿ ಎಸೆಯಬಾರದು. ಇಲ್ಲದಿದ್ದರೆ ಸಿಸಿ ಕ್ಯಾಮರಾ ಮೂಲಕ ಪರಿಶೀಲಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳನ್ನು ಕುರಿತು ಮಾತನಾಡುತ್ತಿದ್ದರು.
ನಗರಗಳ ಪ್ರವೇಶ ಮಾಡುತ್ತಿದ್ದಂತೆಯೇ ಕಸದ ರಾಶಿ, ಕಟ್ಟಡಗಳ ತ್ಯಾಜ್ಯ, ಎದ್ದು ಕಾಣುತ್ತಿದೆ ಅದರ ಬಗ್ಗೆ ಅಧಿಕಾರಿಗಳು ಕ್ರಮಕೈಗೊಂಡು ನಗರಗಳನ್ನು ಸುಂದರವಾಗಿ ನಿರ್ಮಾಣ ಮಾಡಲು ಯೋಜನೆಯನ್ನು ರೂಪಿಸಿಕೊಂಡು ಪಣತೊಡಬೇಕು ಎಂದು ತಿಳಿಸಿದರು.
ಸಾರ್ವಜನಿಕರು ಸಾಮಾನ್ಯವಾಗಿ ಕಸವನ್ನು ಹಾಕುವ ಸ್ಥಳಗಳಲ್ಲಿ ಸ್ಥಳೀಯ ಸಂಸ್ಥೆಗಳಿಂದ ಸಿಸಿ ಕ್ಯಾಮರಾಗಳನ್ನು ಅಳವಡಿಸಬೇಕು ಮತ್ತು ಸಾರ್ವಜನಿಕರಿಗೆ ಕಸವನ್ನು ಹಾಕುವುದರಿಂದ ಆಗುವಂತಹ ತೊಂದರೆಗಳ ಬಗ್ಗೆ ಅರಿವು ಮೂಡಿಸಿ ಮತ್ತೆ ಅಂತಹ ಸ್ಥಳಗಳಲ್ಲಿ ಕಸವನ್ನು ಹಾಕದಂತೆ ಸೂಚಿಸಬೇಕು ಮತ್ತು ನಗರದ ನೈರ್ಮಲ್ಯ ಸ್ವಚ್ಚತೆಯನ್ನು ಕಾಪಾಡಬೇಕು ಎಂದು ತಿಳಿಸಿದರು.
ಕಸವನ್ನು ಸಂಗ್ರಹಿಸಲು ತಮ್ಮ ಮನೆಯ ಬಾಗಿಲಿಗೆ ಸರ್ಕಾರದ ವಾಹನವು ಬರಲಿದೆ ಆದ್ದರಿಂದ ಸಾರ್ವಜನಿಕರು ತಮ್ಮ ಮನೆಯ ಕಸವನ್ನು ಹಸಿಕಸ ಮತ್ತು ಒಣ ಕಸದಂತೆ ವಿಂಗಡಿಸಿ ಕಸದ ವಾಹನಕ್ಕೆ ಹಾಕುವುದರಿಂದ ನಮ್ಮೆಲ್ಲರ ಹಾಗೂ ನಗರದ ಆರೋಗ್ಯವನ್ನು ನಾವು ಕಾಪಾಡಿಕೊಳ್ಳಬಹುದು ಎಂದರು.
ಸಭೆಯಲ್ಲಿ ನಗರಾಭಿವೃದ್ಧಿ ಯೋಜನಾ ಶಾಖಾ ಯೋಜನಾ ನಿರ್ದೇಶಕರಾದ ಅಂಬಿಕಾ, ಎಇಇ ಶ್ರೀನಿವಾಸ್, ಕೌಶಲ್ಯ ಅಭಿವೃದ್ಧಿ ಇಲಾಖೆ ಅಧಿಕಾರಿ ಶ್ರೀನಿವಾಸ್, ಸೇರಿದಂತೆ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಚಿತ್ರ : ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳನ್ನು ಕುರಿತು ಮಾತನಾಡಿದರು.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ