ಗದಗ, 08 ಜುಲೈ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭಾದ ಸಭೆಯನ್ನು ದಿನಾಂಕ 09-07-2025 ನೇ ಬುಧವಾರ ದಿವಸ ಸಂಜೆ 05-00 ಗಂಟೆಗೆ ತೋಂಟದಾರ್ಯ ಮಠದ ಅನುಭವ ಮಂಟಪದಲ್ಲಿ ಕರೆಯಲಾಗಿದೆ.
ಸಭೆಯಲ್ಲಿ ಸೆಪ್ಟೆಂಬರ್ 9 ರಂದು ಗದಗದಲ್ಲಿ ನಡೆಯುವ ಬಸವ ಸಂಸ್ಕೃತಿ ಅಭಿಯಾನ ಕುರಿತು ಚರ್ಚಿಸಲಾಗುವುದು. ಈ ಕಾರ್ಯಕ್ರಮ ಯಶಸ್ವಿ ಮಾಡುವ ಸಲುವಾಗಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.
ಈ ಸಭೆಯ ಸಾನ್ನಿಧ್ಯವನ್ನು ಶ್ರೀ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ವಹಿಸುವರು, ಅಧ್ಯಕ್ಷತೆಯನ್ನು ಲೆಕ್ಕ ಪರಿಶೋಧಕರಾದ ಕೆ ಎಸ್ ಚೆಟ್ಟಿ ವಹಿಸುವರು.
ಸಭೆಯಲ್ಲಿ ಗದಗ ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭಾ ಮಹಿಳಾ ಘಟಕ, ತಾಲೂಕು ಘಟಕ, ಮತ್ತು ಗದಗ ಜಿಲ್ಲೆಯ ನರಗುಂದ, ರೋಣ, ಗಜೇಂದ್ರಗಡ ಮುಂಡರಗಿ, ಶಿರಹಟ್ಟಿ, ಹಾಗೂ ಲಕ್ಷ್ಮೇಶ್ವರ ತಾಲೂಕ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು,ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಗದಗ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ದಲಿತ ಪರ ಸಂಘಟನೆಗಳು, ದಲಿತ ಕಲಾ ಬಳಗ, ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು,ಬಸವ ದಳ, ಬಸವ -ಕೇಂದ್ರ, ಕದಳಿ ವೇದಿಕೆ,ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಎಲ್ಲಾ ಬಸವಪರ ಸಂಘಟನೆಗಳ ಮುಖಂಡರು ಹಾಗೂ ಪದಾಧಿಕಾರಿಗಳು ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕೆಂದು ಕಾರ್ಯದರ್ಶಿ ಶೇಖಣ್ಣ ಕವಳಿಕಾಯಿ ವಿನಂತಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Lalita MP