ಕೋಲಾರ, ೦೮ ಜುಲೈ (ಹಿ ಸ) :
ಆ್ಯಂಕರ್ : ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ದುರಾಡಳಿತವನ್ನು ಜನತೆಗೆ ತಿಳಿಸಲು ಹಾಗೂ ಜೆಡಿಎಸ್ ಪಕ್ಷವನ್ನು ಸಂಘಟಿಸಲು ಜನರೊಂದಿಗೆ ಜನತಾದಳ ಎಂಬ ಘೋಷವಾಕ್ಯದೊಂದಿಗೆ ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಜುಲೈ ೧೦ ರಿಂದ ಕೋಲಾರ ಜಿಲ್ಲಾ ಪ್ರವಾಸವನ್ನು ಹಮ್ಮಿಕೊಂಡಿದ್ದು ಜೆಡಿಎಸ್ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜೆಡಿಎಸ್ ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ ಅವರು ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಪಕ್ಷ ಸಂಘಟನಾ ಉದ್ದೇಶದಿಂದ ರಾಜ್ಯ ಪ್ರವಾಸ ಕೈಗೊಂಡು ಮಿಸ್ ಕಾಲ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಸೇರಿದಂತೆ ಪಕ್ಷದ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ಪ್ರವಾಸವನ್ನು ಕೈಗೊಂಡಿದ್ದು ಕೋಲಾರ ಜಿಲ್ಲೆಗೂ ಆಗಮಿಸಲಿದ್ದು ಪಕ್ಷದ ಕಾರ್ಯಕರ್ತರು ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಜುಲೈ ೧೦ ರಂದು ಬೆಳಗ್ಗೆ ಬಂಗಾರಪೇಟೆ ಮಧ್ಯಾಹ್ನ ಕೋಲಾರ ತಾಲೂಕಿಗಳಿಗೆ ಜು.೧೧ರಂದು ಬೆಳಗ್ಗೆ ಚಿಂತಾಮಣಿ ಮಧ್ಯಾಹ್ನ ಶ್ರೀನಿವಾಸಪುರ ತಾಲೂಕಿಗಳಿಗೆ ಜು.೧೨ ಮಾಲೂರು ತಾಲೂಕಿಗೆ ಭಾಗವಹಿಸಲಿದ್ದಾರೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಮಾರ್ಗದರ್ಶನದಂತೆ ಮೂರು ದಿನಗಳ ಜಿಲ್ಲಾ ಪ್ರವಾಸ ಮಾಡಲಿದ್ದು ಜೆಡಿಎಸ್ ಪಕ್ಷದ ಎಲ್ಲಾ ಕಾರ್ಯಕರ್ತರು ಭಾಗವಹಿಸಿ ಪಕ್ಷದ ಕೈ ಬಲಪಡಿಸಬೇಕು ಎಂದು ಯಲುವಗುಳಿ ನಾಗರಾಜ್ ಮನವಿ ಮಾಡಿದರು.
ಚಿತ್ರ : ಯಲುವಗುಳಿ ನಾಗರಾಜ್ ಮನವಿ.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ