ರಾಜಿಯಾಗಬಹುದಾದ ಪ್ರಕರಣಗಳ ಇತ್ಯರ್ಥಕ್ಕೆ ಜಿಲ್ಲೆಯಲ್ಲಿ ವಿಶೇಷ ಮಧ್ಯಸ್ಥಿಕೆ ಅಭಿಯಾನ
ವಿಜಯಪುರ, 08 ಜುಲೈ (ಹಿ.ಸ.) : ಆ್ಯಂಕರ್ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ ಮತ್ತು ಜಿಲ್ಲಾ ನ್ಯಾಯವಾದಿಗಳ ಸಂಘದ ಸಂಯುಕ್ತಶ್ರಾಯದಲ್ಲಿ ಮಧ್ಯಸ್ಥಿಕೆ ಅಭಿಯಾನದ ಕುರಿತ ಕಾರ್ಯಕ್ರಮವನ್ನು ಶನಿವಾರ ಜಿಲ್ಲಾ ನ್ಯ
ನ್ಯಾಯಾಧೀಶರು


ವಿಜಯಪುರ, 08 ಜುಲೈ (ಹಿ.ಸ.) :

ಆ್ಯಂಕರ್ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ ಮತ್ತು ಜಿಲ್ಲಾ ನ್ಯಾಯವಾದಿಗಳ ಸಂಘದ ಸಂಯುಕ್ತಶ್ರಾಯದಲ್ಲಿ ಮಧ್ಯಸ್ಥಿಕೆ ಅಭಿಯಾನದ ಕುರಿತ ಕಾರ್ಯಕ್ರಮವನ್ನು ಶನಿವಾರ ಜಿಲ್ಲಾ ನ್ಯಾಯವಾದಿಗಳ ಸಂಘದಲ್ಲಿ ಹಮ್ಮಿಕೊಳ್ಳಲಾಯಿತು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಾದ್ಯಂತ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿ ಇರುವ ಮಧ್ಯಸ್ಥಿಕೆಯ ಮೂಲಕ ರಾಜಿ ಆಗಬಹುದದ ಪ್ರಕರಣಗಳ ಇತ್ಯರ್ಥಕ್ಕೆ ಜುಲೈ 01 ರಿಂದ ಅಕ್ಟೋಬರ್ 07ರವರೆಗೆ ಮಧ್ಯಸ್ಥಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಕಕ್ಷಿದಾರರು ಸದರಿ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಮಧ್ಯಸ್ಥಿಕೆ ಅಭಿಯಾನದ ಕುರಿತಾಗಿ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕಾ ಕಾನೂನು ಸೇವೆಗಳ ಸಮಿತಿ, ಇಂಡಿ, ಸಿಂದಗಿ, ಬಸವನಬಾಗೇವಾಡಿ, ಮುದ್ದೇಬಿಹಾಳ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಡಿ.ಜಿ.ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ ಸೇರಿದಂತೆ ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿಗಳು, ಪದಾಧಿಕಾರಿಗಳು, ವಕೀಲರುಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande