ಗಾಣಿಗರ ಪೀಠ : ಸಚಿವ ತಂಗಡಗಿ ಸ್ವಾಮೀಜಿಗಳ ಕ್ಷಮೆ ಕೇಳಿ, ರಾಜೀನಾಮೆ ನೀಡಲಿ : ವೈ.ಎಂ. ಸತೀಶ್
ಬಳ್ಳಾರಿ, 08 ಜುಲೈ (ಹಿ.ಸ.) : ಆ್ಯಂಕರ್ : ವಿಶ್ವ ಗಾಣಿಗರ ಸಮುದಾಯ ಚಾರಿಟಬಲ್ ಟ್ರಸ್ಟ್‍ನ ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ನೀಡಿದ್ದ ಅನುದಾನದ ಬಾಕಿ ಬಿಡುಗಡೆಗೆ ಕಮಿಷನ್ ಕೇಳಿ ರಾಜಕೀಯ ಮಾಡುತ್ತಿರುವ ಸಚಿವ ಶಿವರಾಜ್ ಎಸ್. ತಂಗಡಗಿ ಅ
ಗಾಣಿಗರ ಪೀಠ : ಸಚಿವ ತಂಗಡಗಿ ಸ್ವಾಮೀಜಿಗಳ ಕ್ಷಮೆ ಕೇಳಿ, ರಾಜೀನಾಮೆ ನೀಡಲಿ : ವೈ.ಎಂ. ಸತೀಶ್


ಬಳ್ಳಾರಿ, 08 ಜುಲೈ (ಹಿ.ಸ.) :

ಆ್ಯಂಕರ್ : ವಿಶ್ವ ಗಾಣಿಗರ ಸಮುದಾಯ ಚಾರಿಟಬಲ್ ಟ್ರಸ್ಟ್‍ನ ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ನೀಡಿದ್ದ ಅನುದಾನದ ಬಾಕಿ ಬಿಡುಗಡೆಗೆ ಕಮಿಷನ್ ಕೇಳಿ ರಾಜಕೀಯ ಮಾಡುತ್ತಿರುವ ಸಚಿವ ಶಿವರಾಜ್ ಎಸ್. ತಂಗಡಗಿ ಅವರು ಸ್ವಾಮಿಗಳ ಕ್ಷಮೆ ಕೇಳಿ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಬಳ್ಳಾರಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಅವರು, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗ ಆರ್ಥಿಕ ಇಲಾಖೆಯ ಅನುಮೋದನೆ ಪಡೆದು, ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನಕ್ಕೆ 3.50 ಕೋಟಿ ಅನುದಾನ ನೀಡಿದ್ದು, 2.50 ಕೋಟಿ ರುಪಾಯಿ ಬಿಡುಗಡೆ ಆಗಿದೆ. ಬಾಕಿ ಹಣ ಬಿಡುಗಡೆಗಾಗಿ ಮಾರ್ಚ್‍ನಲ್ಲಿ ನ್ಯಾಯಾಲಯ ತೀರ್ಪು ನೀಡಿ, ನಾಲ್ಕು ವಾರದಲ್ಲಿ ಹಣ ಬಿಡುಗಡೆ ಮಾಡಬೇಕು ಎಂದು ಸ್ಪಷ್ಟವಾಗಿ ಹೇಳಿದ್ದರೂ, ಸಚಿವರು ಲಂಚಕ್ಕಾಗಿ ಹಣ ಬಿಡುಗಡೆ ಮಾಡದೇ ರಾಜಕೀಯ ಮಾಡುತ್ತಿದ್ದಾರೆ ಎಂದರು.

ಮಾಜಿ ಶಾಸಕ ಜಿ. ಸೋಮಶೇಖರರೆಡ್ಡಿ ಅವರು, ಬಳ್ಳಾರಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಧ್ಯಾನ ಕೇಂದ್ರ ಮತ್ತು ಎಚ್.ಆರ್. ಗವಿಯಪ್ಪ ವೃತ್ತದ (ಕೆಇಬಿ ಕಚೇರಿ) ಪಕ್ಕದಲ್ಲಿರುವ ಶ್ರೀರಾಮ ದೇವಸ್ಥಾನಕ್ಕೂ ಹಣ ಬಿಡುಗಡೆ ಆಗಬೇಕಿದೆ. ಬಳ್ಳಾರಿ ಶಾಸಕ ನಾರಾ ಭರತರೆಡ್ಡಿ ಅವರು ಹಿಂದೂ ದೇವಾಲಯಗಳಿಗೆ 5 ಕೋಟಿ ರುಪಾಯಿ ಅನುದಾನ ನೀಡಿರುವುದಾದರೂ ಎಲ್ಲಿ? ಸಮಗ್ರ ಮಾಹಿತಿಯನ್ನು ಬಹಿರಂಗಪಡಿಸಲಿ ಎಂದರು.

ಮಾಜಿ ಶಾಸಕ ಜಿ. ಸೋಮಶೇಖರರೆಡ್ಡಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಅನಿಲ್ ನಾಯ್ಡು ಮೋಕ ಇನ್ನಿತರರು ಈ ಸಂದರ್ಭದಲ್ಲಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande