ರಿಮ್ಸ್‍ನಲ್ಲಿ ಆರೋಗ್ಯ ಸೇವೆ ಒದಗಿಸಲು ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ
ರಾಯಚೂರು, 09 ಜುಲೈ (ಹಿ.ಸ.) : ಆ್ಯಂಕರ್ : ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಮಾನಸಿಕ ಅನಾರೋಗ್ಯದಿಂದ ಬಳಲುತ್ತಿರುವ ನಿರಾಶ್ರಿತರಿಗೆ ಇಲ್ಲಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯ ಸೇವೆಗಳನ್ನು ಒದಗಿಸಲು ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರ ಸ್ಥಾಪಿಸಲು ಸರ್ಕಾರೇತರ ಸಂಸ್ಥೆ
ರಿಮ್ಸ್‍ನಲ್ಲಿ ಆರೋಗ್ಯ ಸೇವೆ ಒದಗಿಸಲು ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ


ರಾಯಚೂರು, 09 ಜುಲೈ (ಹಿ.ಸ.) :

ಆ್ಯಂಕರ್ : ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಮಾನಸಿಕ ಅನಾರೋಗ್ಯದಿಂದ ಬಳಲುತ್ತಿರುವ ನಿರಾಶ್ರಿತರಿಗೆ ಇಲ್ಲಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯ ಸೇವೆಗಳನ್ನು ಒದಗಿಸಲು ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರ ಸ್ಥಾಪಿಸಲು ಸರ್ಕಾರೇತರ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯ ಅವಧಿಯನ್ನು ಜುಲೈ 23ರವರೆಗೆ ವಿಸ್ತರಿಸಲಾಗಿದೆ.

ಇಸಿಆರ್‍ಸಿ ಘಟಕವನ್ನು ನಡೆಸಲು ಆಸಕ್ತಿಯುಳ್ಳ ಎನ್.ಜಿ.ಒ ಸಂಸ್ಥೆಗಳು ವೆಬ್‍ಸೈಟ್ ವಿಳಾಸ: https://kppp.karntaka.gov.in ನಲ್ಲಿ ಜುಲೈ 23ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಲಯದ ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗಕ್ಕೆ ಭೇಟಿ ನೀಡಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande