ನವದೆಹಲಿ, 9 ಜುಲೈ (ಹಿ.ಸ.) :
ಆ್ಯಂಕರ್ : ದೇಶದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೆಲವು ರಾಜ್ಯಗಳಿಗೆ ಕೆಂಪು ಎಚ್ಚರಿಕೆ ನೀಡಲಾಗಿದೆ. ಕೆಲವು ಕಡೆ ಬಿರುಗಾಳಿ ಸಹಿತ ಮಳೆ ಆಗಲಿದೆ. ಪ್ರವಾಹ, ಗುಡ್ಡ ಕುಸಿತ, ಭೂಕುಸಿತದ ಎಚ್ಚರಿಕೆ ನೀಡಿದ್ದು, ಜನರು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆಯೂ ಸೂಚಿಸಲಾಗಿದೆ.
ಕಳೆದ ಕೆಲವು ದಿನಗಳಲ್ಲಿ ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ಮೇಘಸ್ಫೋಟ, ಭೂಕುಸಿತ ಮತ್ತು ನಗರ ಪ್ರದೇಶಗಳಲ್ಲಿ ಪ್ರವಾಹದಂತಹ ಘಟನೆಗಳು ವರದಿ ಆಗಿರುವುದರಿಂದ, ರಾಜ್ಯ ಸರ್ಕಾರಗಳು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆ ಸೂಚಿಸಿದೆ. ಮಹಾರಾಷ್ಟ್ರ ಮತ್ತು ಒಡಿಶಾದ ಮಳೆಯಿಂದ ಪರಿಹಾರ ಮತ್ತು ಸ್ಥಳಾಂತರಿಸುವ ಕಾರ್ಯ ಮುಂದುವರೆದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa