ಹೊಸಪೇಟೆ, 09 ಜುಲೈ (ಹಿ.ಸ.) :
ಆ್ಯಂಕರ್ : 2025-26 ನೇ ಸಾಲಿನಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಚೇರಿಗೆ ಅನುಮೋದನೆ ಆಗಿರುವ 01 ಕೀಟ ಸಂಗ್ರಹಕರ (INSECT COLLECTOR) ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಹುದ್ದೆಗೆ ಆಯ್ಕೆ ಪಟ್ಟಿ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಿದವರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಒಟ್ಟು ಅರ್ಜಿ ಸಲ್ಲಿಸುವ ಪಟ್ಟಿ, ತಿರಸ್ಕರಿಸಿದ ಅರ್ಜಿದಾರರ ಪಟ್ಟಿ, ಅರ್ಹ ಅರ್ಜಿದಾರರ ಪಟ್ಟಿ, ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ತಾತ್ಕಾಲಿಕ ಆಯ್ಕೆಯಲ್ಲಿನ ಕಾಯ್ದಿರಿಸಿದ ಪಟ್ಟಿಗಳನ್ನು ವಿಜಯನಗರ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳ (ಜಿಲ್ಲಾ ವಿಬಿಡಿಸಿ ಅಧಿಕಾರಿಗಳ) ಕಚೇರಿಯ ಸೂಚನಾ ಫಲಕದಲ್ಲಿ ಹಾಗೂ ವಿಜಯನಗರ ಜಿಲ್ಲೆಯ ಎನ್‍ಐಸಿ ವೆಬ್‍ಸೈಟ್‍ನಲ್ಲಿಯೂ ಪ್ರಕಟಿಸಿದ್ದು ಸಂಬಂಧಿಸಿದಂತೆ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಜು.15 ರೊಳಗಾಗಿ ಕಚೇರಿಯ ಸಮಯದಲ್ಲಿ ಲಿಖಿತ ರೂಪದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್