ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಚಾಲನೆ
ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಚಾಲನೆ
ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಚಾಲನೆ


ಬೆಂಗಳೂರು, 09 ಜುಲೈ (ಹಿ.ಸ.) :

ಆ್ಯಂಕರ್ : ಶಾಸಕ ಕೊತ್ತೂರು ಜಿ.ಮಂಜುನಾಥ್ ಅವರು ಬುಧವಾರ ತಾಲ್ಲೂಕಿನಲ್ಲಿ ಸುಮಾರು ೬೩೯ ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಹಾಗೂ ಗಂಗಾ ಕಲ್ಯಾಣ ಯೋಜನೆಯಡಿ ೩೫ ಫಲಾನುಭವಿಗಳಿಗೆ ಮಂಜೂರಾಗಿರುವ ಉಚಿತ ಕೊಳವೆಬಾವಿ ಕೊರೆಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂಧರ್ಭದಲ್ಲಿ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್ ಕೋಲಾರ ನಗರಸಭೆ ಡಲ್ಟ್ ಅನುದಾನದಲ್ಲಿ ನಗರದ ಪೋಲಿಸ್ ವರಿಷ್ಠಾಧಿಕಾರಿ ರವರ ವಸತಿ ಗೃಹದಿಂದ ಚಿಕ್ಕಬಳ್ಳಾಪುರ ರಸ್ತೆ ರೈಲ್ವೆ ಸೇತುವೆವರೆಗೆ ೩೮೯ ಲಕ್ಷಗಳ ವೆಚ್ಚದಲ್ಲಿ ರಸ್ತೆ ಮತ್ತು ಫುಟ್ ಪಾತ್ ಅಭಿವೃದ್ಧಿ ಹಾಗೂ ಕೋಲಾರ ನಗರಸಭೆಯ ಎಸ್.ಡಿ.ಎಂ.ಎಫ್ ಅನುದಾನದಲ್ಲಿ ಅಂದಾಜು ಮೊತ್ತ ೨೫೦ ಲಕ್ಷಗಳ

ವೆಚ್ಚದಲ್ಲಿ ಕೋಲಾರ ನಗರದ ಕೋಲಾರಮ್ಮ ಕೆರೆಗೆ ಸೇರುವ ರಾಜಕಾಲುವೆಯಲ್ಲಿ ಸೇತುವೆ ಮತ್ತು ತಡೆಗೋಡೆ ನಿರ್ಮಾಣ ಮಾಡುತ್ತಿರುವುದಾಗಿ ತಿಳಿಸಿದರು.

ಈ ಸಂಧರ್ಭದಲ್ಲಿ ಎಂಎಲ್ಸಿ ಎಂ.ಎಲ್.ಅನಿಲ್ ಕುಮಾರ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಸದಸ್ಯ ಮುರಳೀಗೌಡ, ರಾಕೇಶ್, ಮಂಜುನಾಥ್ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಸುಜಾತ ಚಾಂದಕವಟೆ, ಕ್ಷೇತ್ರ ಅಧಿಕಾರಿ ಅಂಬರೀಶ್, ಸಿಬ್ಬಂದಿ ವಿಶ್ವನಾಥ, ಗುತ್ತಿಗೆದಾರ ಚಲಪತಿ ಮುಖಂಡರಾದ ಮೈಲಾಂಡಹಳ್ಳಿ ಮುರಳಿ ಮುಂತಾದವರಿದ್ದರು.

ಚಿತ್ರ : ಶಾಸಕ ಕೊತ್ತೂರು ಜಿ.ಮಂಜುನಾಥ್ ಬುಧವಾರ ತಾಲ್ಲೂಕಿನಲ್ಲಿ ಸುಮಾರು ೬೩೯ ಲಕ್ಷ ವೆಚ್ಚದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ


 rajesh pande