ನಾಯಕತ್ವದ ಬಗ್ಗೆ ಸಭೆ ನಡೆದಿಲ್ಲ : ಸುರ್ಜೆವಾಲಾ
ಬೆಂಗಳೂರು, 09 ಜುಲೈ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ನಾಯಕತ್ವದ ಬಗ್ಗೆ ಚರ್ಚೆ ಮಾಡುವ ಸಭೆ ನಡೆದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಶಾಸಕರ ಜೊತೆ ಸಭೆಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ
ಸುರ್ಜೆವಾಲಾ


ಬೆಂಗಳೂರು, 09 ಜುಲೈ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ನಾಯಕತ್ವದ ಬಗ್ಗೆ ಚರ್ಚೆ ಮಾಡುವ ಸಭೆ ನಡೆದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು ಶಾಸಕರ ಜೊತೆ ಸಭೆಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಡಿ.ಕೆ.ಶಿವಕುಮಾರ್ ಸಭೆ ಮಾಡುತ್ತಾರೆ ಎನ್ನುವುದು ಕೇವಲ ಊಹಾಪೋಹ ಎಂದರು.

ಅನುದಾನ ತಾರತಮ್ಯ ಗಮನ ಸೆಳೆಯಲು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ದೆಹಲಿಗೆ ತೆರಳಿದ್ದು ನಾಯಕತ್ವ ಬಗ್ಗೆ ಚರ್ಚೆ ಮಾಡುವ ಸಭೆ ನಿಗದಿಯಾಗಿಲ್ಲ. ಅನುದಾನ ತಾರತಮ್ಯದ ಗಮನ ಸೆಳೆಯಲು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಹೋಗಿದ್ದಾರೆ. ಕಳಸಾ ಬಂಡೂರಿಗೆ ಕೇಂದ್ರ ಅನುಮತಿ ನೀಡಿಲ್ಲ. ಮೇಕೆದಾಟು ಯೋಜನೆಯನ್ನು ಹಿಡಿದಿಟ್ಟುಕೊಂಡಿದೆ. ಇದೆಲ್ಲದರ ಬಗ್ಗೆ ಗಮನ ಸೆಳೆಯಲು ದೆಹಲಿಗೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಹೋಗಿದ್ದಾರೆ. ಜಿಎಸ್​​​ಟಿ ಪರಿಹಾರವನ್ನು ತಡೆಹಿಡಿಯಲಾಗಿದೆ ಅದರ ಬಗ್ಗೆ , ಕೇಂದ್ರ ಸಚಿವರನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande