ಬಳ್ಳಾರಿ, 09 ಜುಲೈ (ಹಿ.ಸ.) :
ಆ್ಯಂಕರ್ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26 ನೇ ಸಾಲಿಗೆ ಪದ್ಮಶ್ರೇಣಿ ಪ್ರಶಸ್ತಿಗಳಿಗೆ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವೈದ್ಯಕೀಯ ಸಮಾಜ ಸೇವೆ, ವಿಜ್ಞಾನ ಮತ್ತು ಇಂಜಿನೀಯರಿAಗ್, ಸಾರ್ವಜನಿಕ ವ್ಯವಹಾರಗಳು, ನಾಗರೀಕ ಸೇವೆ ವ್ಯಾಪಾರ ಮತ್ತು ಕೈಗಾರಿಕೆ ಇತ್ಯಾದಿ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನವಾಗಿದೆ. ನಿಗದಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಹಾಗೂ ಸಾಪ್ಟ್ ಪ್ರತಿಯನ್ನು ಇ-ಮೇಲ್ ವಿಳಾಸ uspoliticaldpar@karnataka.gov.in ನಲ್ಲಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೇರುವು ಪ್ರದೇಶ ವಾಲ್ಮೀಕಿ ಭವನದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್