ರಾಯಚೂರು, 01 ಆಗಸ್ಟ್ (ಹಿ.ಸ.) :
ಆ್ಯಂಕರ್ : ಖಾಸಗಿ ಜಮೀನುಗಳಲ್ಲಿ ನೆಲೆಸಿರುವ ದಾಖಲೆ ರಹಿತ ಜನವಸತಿಗಳನ್ನು ಕಂದಾಯ ಗ್ರಾಮ ಅಥವಾ ಗ್ರಾಮದ ಭಾಗವಾಗಿ ಪರಿವರ್ತಿಸಿ ಅಲ್ಲಿಯ ನಿವಾಸಿಗಳಿಗೆ ಹಕ್ಕು ಪತ್ರ ನೀಡುವ ಕುರಿತು ಸರ್ಕಾರದ ಆದೇಶವಿದ್ದು, ಅದರಂತೆ ಜಿಲ್ಲೆಯಲ್ಲಿನ ಅರ್ಹ ಪ್ರಕರಣಗಳಲ್ಲಿ ಕಂದಾಯ ಗ್ರಾಮ ಮತ್ತು ಉಪ ಗ್ರಾಮಗಳನ್ನು ರಚನೆ ಮಾಡಲಾಗುತ್ತಿದ್ದು, ಜಿಲ್ಲೆಯ ಸಾರ್ವಜನಿಕರು ಅರ್ಹತೆ ಹೊಂದಿದಲ್ಲಿ ಸಂಬಂಧಿಸಿದ ತಾಲೂಕು ಕಾರ್ಯಾಲಯಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್