ಬಳ್ಳಾರಿ, 01 ಆಗಸ್ಟ್ (ಹಿ.ಸ.) :
ಆ್ಯಂಕರ್ : 2024-25ನೇ ಶೈಕ್ಷಣಿಕ ಸಾಲಿನಲ್ಲಿ ನಡೆದಂತಹ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಜಿಲ್ಲೆಯ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ “ಜನರಲ್ ಕೆ ಎಸ್ ತಿಮ್ಮಯ್ಯ” ನಗದು ಪ್ರಶಸ್ತಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಧಾರವಾಡ ಕಾರ್ಯಾಲಯದಿಂದ ಪಡೆದು ಭರ್ತಿ ಮಾಡಿ ನವೆಂಬರ್ 30 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಧಾರವಾಡ ಅಥವಾ ದೂ.08362440176 ಗೆ ಸಂಪರ್ಕಿಸಬಹುದು ಎಂದು ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್