ಬಳ್ಳಾರಿ, 01 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ (ಕೆ.ಐ.ಎ.ಡಿ.ಬಿ) ಬಳ್ಳಾರಿಯ ಸಂಜೀವರಾಯನಕೋಟೆ ಗ್ರಾಮದಲ್ಲಿ 154-58 ಎಕರೆಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪಿಸಲು ಉದ್ದೇಶಿದ್ದು, ಅದರಲ್ಲಿನ ಕೈಗಾರಿಕಾ ನಿವೇಶನಗಳಿಗಾಗಿ ಬೇಡಿಕೆ ಕುರಿತು ಆಸಕ್ತ ಗಾರ್ಮೆಂಟ್ಸ್ ಉದ್ದಿಮೆದಾರರೊಂದಿಗೆ ಆಗಸ್ಟ್ 02 ರಂದು ಬೆಳಿಗ್ಗೆ 11 ಗಂಟೆಗೆ ಕೆಐಎಡಿಬಿ ಬಳ್ಳಾರಿ ಕಚೇರಿಯಲ್ಲಿ ಸಭೆ ಆಯೋಜಿಸಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಕೆಐಎಡಿಬಿ ವತಿಯಿಂದ ಬಳ್ಳಾರಿ ತಾಲ್ಲೂಕಿನ ಸಂಜೀವರಾಯನಕೋಟೆ ಗ್ರಾಮದಲ್ಲಿ 154-58 ಎಕರೆ ಪ್ರದೇಶದಲ್ಲಿ ಜೀನ್ಸ್ ಪಾರ್ಕ್ ಸ್ಥಾಪಿಸಲು ಭೂ-ಅಭಿವೃದ್ಧಿ ಪಡಿಸಲಾಗುವುದು ಎಂದು ಕೆಐಎಡಿಬಿ ಅಧಿಕಾರಿಗಳು ತಿಳಿಸಿದ್ದು, ಜಮೀನಿನಲ್ಲಿ ಹೂಡಿಕೆ ಮಾಡಲು ಆಸಕ್ತಿ ಇರುವ ಜೀನ್ಸ್/ಜವಳಿ ಉದ್ದಿಮೆದಾರರಿಂದ ನಿವೇಶನ ಹಂಚಿಕೆಗಾಗಿ ಬೇಡಿಕೆಯ ಬಗ್ಗೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿತ್ತು. ಈ ಪ್ರದೇಶದಲ್ಲಿನ ಕೈಗಾರಿಕಾ ನಿವೇಶನಗಳಿಗಾಗಿ ಬೇಡಿಕೆ ಕುರಿತು ಆಸಕ್ತ ಗಾರ್ಮೆಂಟ್ಸ್ ಉದ್ದಿಮೆದಾರರೊಂದಿಗೆ ಸಭೆ ಹಮ್ಮಿಕೊಳ್ಳಲಾಗಿದೆ.
ಸಭೆಗೆ ಬಳ್ಳಾರಿಯ ಆಸಕ್ತ ಜೀನ್ಸ್, ಗಾರ್ಮೆಂಟ್ಸ್ ಉದ್ದಿಮೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಮಾಹಿತಿಗಾಗಿ ಮೊ.9901313417, 7975234573 ಮತ್ತು 9844837264 ಗೆ ಸಂಪರ್ಕಿಸಬಹುದು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್