ಕುರುಗೋಡು : ತಾಯಿ, ಮಕ್ಕಳು ಕಾಣೆ ; ಪತ್ತೆಗೆ ಮನವಿ
ಬಳ್ಳಾರಿ, 01 ಆಗಸ್ಟ್ (ಹಿ.ಸ.) : ಆ್ಯಂಕರ್ : ಕುರುಗೋಡು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಮಮತ (25) ಮಕ್ಕಳಾದ ದೇವಂತ ರೆಡ್ಡಿ (04) ಹಾಗೂ ಧನ್ವತಾ )02) ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಮನವಿ ಮಾಡಿದ್ದಾರೆ. ಮಹಿಳೆ ಮತ್ತು ಮಕ್
ಕುರುಗೋಡು : ತಾಯಿ, ಮಕ್ಕಳು ಕಾಣೆ: ಪತ್ತೆಗೆ ಮನವಿ


ಬಳ್ಳಾರಿ, 01 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕುರುಗೋಡು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಮಮತ (25) ಮಕ್ಕಳಾದ ದೇವಂತ ರೆಡ್ಡಿ (04) ಹಾಗೂ ಧನ್ವತಾ )02) ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಮನವಿ ಮಾಡಿದ್ದಾರೆ.

ಮಹಿಳೆ ಮತ್ತು ಮಕ್ಕಳ ಚಹರೆ :

ಮಮತ: ಎತ್ತರ 4.5 ಅಡಿ, ದುಂಡು ಮುಖ, ಗೋಧಿ ಮೈಬಣ್ಣ, ದುಂಡನೆಯ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಹಸಿರು ಬಣ್ಣದ ಟಾಪ್ ಮತ್ತು ಕ್ರಿಮ್ ಬಣ್ಣದ ಪ್ಯಾಂಟ್ ಧರಿಸಿರುತ್ತಾಳೆ. ಕನ್ನಡ, ತೆಲುಗು ಮತ್ತು ಹಿಂದಿ ಭಾμÉ ಮಾತನಾಡುತ್ತಾಳೆ.

ದೇವಂತಾ ರೆಡ್ಡಿ: ಸುಮಾರು 03 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ, ಸಾದಾರಣ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಕೆಂಪು ಅಂಗಿ, ಬಿಳಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಭಾಷೆ ಮಾತನಾಡುತ್ತಾನೆ.

ಧನ್ವತಾ: ಸುಮಾರು 02 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ, ಸಾದಾರಣ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಬಿಳಿ ಅಂಗಿ, ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ತೆಲುಗು ಭಾಷೆ ಮಾತನಾಡುತ್ತಾಳೆ.

ಮೇಲ್ಕಂಡ ಚಹರೆ ಗುರುತುಗಳುಳ್ಳ ಮಹಿಳೆ ಮತ್ತು ಮಕ್ಕಳ ಬಗ್ಗೆ ಮಾಹಿತಿ ದೊರೆತಲ್ಲಿ ಕುರುಗೋಡು ಪೆÇಲೀಸ್ ಠಾಣೆಯ ದೂ.08392-263433 ಅಥವಾ ಮೊ.9480803051, 9480803039 ಗೆ ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande