ಸ್ವಾತಂತ್ರ್ಯ ದಿನದ ಭಾಷಣಕ್ಕೆ ಸಾರ್ವಜನಿಕರಿಂದ ಅಭಿಪ್ರಾಯ ಆಹ್ವಾನಿಸಿದ ಪ್ರಧಾನಿ ಮೋದಿ
ನವದೆಹಲಿ, 01 ಆಗಸ್ಟ್ (ಹಿ.ಸ.) : ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 2025ರ ಆಗಸ್ಟ್ 15ರಂದು ತಮ್ಮ ಸ್ವಾತಂತ್ರ್ಯ ದಿನದ ಭಾಷಣದ ಭಾಗ ರೂಪಿಸಲು ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಕರೆ ನೀಡಿರುವ ಅವರು ಈ ವರ್ಷದ ಸ್ವಾತಂತ್ರ್ಯ ದಿನ ಸಮೀಪಿಸುತ್ತಿರು
Pm


ನವದೆಹಲಿ, 01 ಆಗಸ್ಟ್ (ಹಿ.ಸ.) :

ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 2025ರ ಆಗಸ್ಟ್ 15ರಂದು ತಮ್ಮ ಸ್ವಾತಂತ್ರ್ಯ ದಿನದ ಭಾಷಣದ ಭಾಗ ರೂಪಿಸಲು ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಕರೆ ನೀಡಿರುವ ಅವರು ಈ ವರ್ಷದ ಸ್ವಾತಂತ್ರ್ಯ ದಿನ ಸಮೀಪಿಸುತ್ತಿರುವಾಗ, ನನ್ನ ಸಹ ಭಾರತೀಯರಿಂದ ಸಲಹೆಗಳನ್ನು ಕೇಳಲು ನಾನು ಕಾತುರದಿಂದ ಕಾಯುತ್ತಿದ್ದೇನೆ! ಎಂದಿದ್ದು, ಸಾರ್ವಜನಿಕರು MyGov ಹಾಗೂ NaMo ಆಪ್‌ಗಳ ಮೂಲಕ ಅಭಿಪ್ರಾಯ ಹಂಚಿಕೊಳ್ಳಲು ಕರೆ ನೀಡಿದ್ದಾರೆ.

ಪೌರರು ಶಿಕ್ಷಣ, ಉದ್ಯೋಗ, ಕೃಷಿ, ತಂತ್ರಜ್ಞಾನ, ಆರೋಗ್ಯ, ಮಹಿಳಾ ಸಬಲೀಕರಣ, ಪರಿಸರ ಇತ್ಯಾದಿ ವಿಷಯಗಳಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಳ್ಳಬಹುದಾಗಿದೆ. ಪ್ರಧಾನಿ ಭಾಷಣದಲ್ಲಿ ಈ ಸೂಚನೆಗಳಿಗೆ ಪ್ರಾಮುಖ್ಯತೆ ನೀಡಲಾಗುವುದು ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande