ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ
ಶಿವಮೊಗ್ಗ, 10 ಆಗಸ್ಟ್ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ಸಾಗರದ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 3 ವರ್ಷದ ಅವಧಿಗೆ ಇಬ್ಬರು ಸಾಮಾಜಿಕ ಕಾರ್ಯಕತರು ಅದರಲ್ಲಿ ಓರ್ವ ಮಹಿಳೆ ಹಾಗೂ ಹಣಕಾಸು ಮತ್ತು ಪತ್ತಿನ ವ್ಯವಹಾರವನ್ನು ನಡೆಸುವ ಸಂಸ್ಥೆಗಳನ್ನು ಪ್ರತಿಸಿಧಿಸುವ ಒಬ್ಬ ವ್ಯಕ್ತಿಯನ್ನು ಉಪವಿಭಾಗ ಮಟ್ಟ
ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ


ಶಿವಮೊಗ್ಗ, 10 ಆಗಸ್ಟ್ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ಸಾಗರದ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 3 ವರ್ಷದ ಅವಧಿಗೆ ಇಬ್ಬರು ಸಾಮಾಜಿಕ ಕಾರ್ಯಕತರು ಅದರಲ್ಲಿ ಓರ್ವ ಮಹಿಳೆ ಹಾಗೂ ಹಣಕಾಸು ಮತ್ತು ಪತ್ತಿನ ವ್ಯವಹಾರವನ್ನು ನಡೆಸುವ ಸಂಸ್ಥೆಗಳನ್ನು ಪ್ರತಿಸಿಧಿಸುವ ಒಬ್ಬ ವ್ಯಕ್ತಿಯನ್ನು ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ನಾಮನಿರ್ದೇಶನ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ

ಅರ್ಜಿಯನ್ನು ಸಲ್ಲಿಸಲು ಆಗಸ್ಟ್ 20 ಕೊನೆಯ ದಿನವಾಗಿರುತ್ತದೆ. ಮ್ಯಾನ್ಯುಯಲ್ ಸ್ಕಾವೆಂಜಿಂಗ್ ನೇಮಕಾತಿ ಮತ್ತು ಅವರ ಪುನರ್ವಸತಿ ಅಧಿನಿಯಮ 2013ರ ಕಾಯ್ದೆ 24 ರ ಅಡಿಯಲ್ಲಿ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ಸದಸ್ಯರ ನೇಮಕ ಮಾಡಿಕೊಳ್ಳಲಾಗುತ್ತದೆ

ನಾಮನಿರ್ದೇಶಿತ ಸದಸ್ಯರನ್ನು ಆಯ್ಕೆ ಮಾಡಲಾಗುತ್ತದೆ. ಉಪವಿಭಾಗದಲ್ಲಿ ಮ್ಯಾನ್ಯೂಯಲ್ ಸ್ಕಾö್ಯವೆಂಜರ್ ಕೆಲಸವನ್ನು ನಿಷೇಧಿಸುವುದಕ್ಕಾಗಿ ಮತ್ತು ಸಂಘಟನೆಯಲ್ಲಿ ಕೆಲಸ ಮಾಡುತ್ತಿರುವ ಅಥವಾ ಉಪವಿಭಾಗದಲ್ಲಿ ವಾಸಿಸುತ್ತಿರುವ ಸಮುದಾಯವನ್ನು ಪ್ರತಿನಿಧಿಸುವ ಇಬ್ಬರು ಸಾಮಾಜಿಕ ಕಾರ್ಯಕರ್ತರು ಅದರಲ್ಲಿ ಕಡ್ಡಾಯವಾಗಿ ಒಬ್ಬರು ಮಹಿಳೆಯಾಗಿರತಕ್ಕದ್ದು. ಹಾಗೂ ಪತ್ತಿನ ವ್ಯವಹಾರವನ್ನು ನಡೆಸುವ ಸಂಸ್ಥೆಗಳನ್ನು ಪ್ರತಿನಿಧಿಸುವ ಒಬ್ಬ ವ್ಯಕ್ತಿಯನ್ನು ಸಮಿತಿಗೆ ನಾಮನಿರ್ದೇಶನ ಮಾಡಿಕೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಾಗರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು, ಮೊ.ಸಂ.9480843192,ದೂ.ಸA.08183-229402 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು(ಗ್ರೇಡ್-2) ತಿಳಿಸಿದ್ದಾರೆ

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande