ಧರ್ಮಸ್ಥಳ ಶವ ಹೂತ ಪ್ರಕರಣ : ಧರ್ಮ ಸಂರಕ್ಷಣಾ ಸಮಾವೇಶಕ್ಕೆ ಸಿದ್ದತೆ
ಮಂಗಳೂರು, 11 ಆಗಸ್ಟ್ (ಹಿ.ಸ.) : ಆ್ಯಂಕರ್ : ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಪವಿತ್ರ ಧಾರ್ಮಿಕ ಕೇಂದ್ರ ಧರ್ಮಸ್ಥಳದಲ್ಲಿ ನಡೆದ ಶವ ಹೂತ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಕೇಂದ್ರಗಳ ಸಂರಕ್ಷಣೆಗೆ ಆಗಸ್ಟ್ 24ರಂದು ಧರ್ಮಸ್ಥಳದಲ್ಲಿ ಬೃಹತ್ ಧರ್ಮ ಸಂರಕ್ಷಣಾ ಸಮಾವೇಶ ನ
Dharmastal


ಮಂಗಳೂರು, 11 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಪವಿತ್ರ ಧಾರ್ಮಿಕ ಕೇಂದ್ರ ಧರ್ಮಸ್ಥಳದಲ್ಲಿ ನಡೆದ ಶವ ಹೂತ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಕೇಂದ್ರಗಳ ಸಂರಕ್ಷಣೆಗೆ ಆಗಸ್ಟ್ 24ರಂದು ಧರ್ಮಸ್ಥಳದಲ್ಲಿ ಬೃಹತ್ ಧರ್ಮ ಸಂರಕ್ಷಣಾ ಸಮಾವೇಶ ನಡೆಸಲು ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ಮುಂದಾಗಿದೆ.

ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ನಡೆಯುವ ಈ ಸಮಾವೇಶದಲ್ಲಿ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದು, ಧಾರ್ಮಿಕ ಕೇಂದ್ರಗಳ ಮೇಲಿನ ದಾಳಿಗಳ ವಿರುದ್ಧ ಒಗ್ಗಟ್ಟಿನ ಸಂದೇಶ ಸಾರುವ ಗುರಿ ಹೊಂದಲಾಗಿದೆ.

ಈಗಾಗಲೇ ವಿಶ್ವ ಹಿಂದೂ ಪರಿಷತ್ ಮತ್ತು ಭಾರತೀಯ ಜನತಾ ಪಕ್ಷ ಈ ಆರೋಪಗಳನ್ನು “ಹಿಂದೂ ವಿರೋಧಿ ಅಂತರರಾಷ್ಟ್ರೀಯ ಷಡ್ಯಂತ್ರ” ಎಂದು ಕರೆದಿದ್ದು, ತಪ್ಪು ಮಾಹಿತಿಯನ್ನು ಹರಡಲಾಗುತ್ತಿದೆ ಎಂದು ಆರೋಪಿಸಿವೆ.

ಧರ್ಮ ಸಂರಕ್ಷಣಾ ಸಮಾವೇಶದಲ್ಲಿ ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆ ದಿಕ್ಸೂಚಿ ಭಾಷಣ ಮಾಡಲಿದ್ದು, ರಾಜ್ಯದ ಪ್ರಮುಖ ಹಿಂದೂ ನಾಯಕರು, ಧಾರ್ಮಿಕ ಮುಖಂಡರು ಹಾಗೂ ಸಾಮಾಜಿಕ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಧಾರ್ಮಿಕ ಕೇಂದ್ರಗಳ ಗೌರವ ಕಾಪಾಡುವ ಹಾಗೂ ತಪ್ಪು ಮಾಹಿತಿಯನ್ನು ತಡೆಯುವ ಕ್ರಮಗಳ ಬಗ್ಗೆ ಸಮಾವೇಶದಲ್ಲಿ ಚರ್ಚೆ ನಡೆಯಲಿದೆ.

ಪ್ರಕರಣದ ಹಿನ್ನೆಲೆ

ಜುಲೈ 2025ರಲ್ಲಿ, ಮಾಜಿ ಸ್ವಚ್ಛತಾ ಕಾರ್ಮಿಕನೊಬ್ಬ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಆರೋಪಿಸಿದ್ದ. ಈ ದೂರಿನ ಆಧಾರದ ಮೇಲೆ ರಾಜ್ಯ ಸರಕಾರ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ಹಸ್ತಾಂತರಿಸಿತು. ತನಿಖೆಯ ಅಂಗವಾಗಿ ಗುರುತಿಸಿದ ಸ್ಥಳಗಳಲ್ಲಿ ಶೋಧ ಕಾರ್ಯ ನಡೆದಿದ್ದು, ಆಗಸ್ಟ್ 4ರಂದು ಆರನೇ ಸ್ಥಳದಲ್ಲಿ ಕೆಲವು ಮಾನವ ಅಸ್ಥಿಪಂಜರಗಳು ಪತ್ತೆಯಾಗಿದ್ದವು, ಇತರ ಸ್ಥಳಗಳಲ್ಲಿ ಇದುವರೆಗೂ ಯಾವುದೇ ಸಾಕ್ಷ್ಯ ಲಭ್ಯವಾಗಿಲ್ಲ. ಎಸ್ಐಟಿ ತಂಡ ಅನಾಮಿಕ ದೂರುದಾರನ ಮಾಹಿತಿಯಂತೆ ಧರ್ಮಸ್ಥಳ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಉತ್ಖನನ ಕಾರ್ಯ ಮುಂದುವರೆಸಿದೆ.

ಧರ್ಮಸ್ಥಳ ಕ್ಷೇತ್ರದ ಮಹತ್ವ:

ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನವು ದಕ್ಷಿಣ ಭಾರತದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿದ್ದು, ಶತಮಾನಗಳಿಂದ ಭಕ್ತರ ನಂಬಿಕೆ ಮತ್ತು ಸೇವಾ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದೆ. ಇತ್ತೀಚಿನ ಆರೋಪಗಳು ಈ ಕ್ಷೇತ್ರದ ಗೌರವಕ್ಕೆ ಧಕ್ಕೆ ತಂದಿರುವುದರಿಂದ, ಸಮಾವೇಶವು ಗಮನ ಸೆಳೆದಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande