ಹೊಸಪೇಟೆ, 11 ಆಗಸ್ಟ್ (ಹಿ.ಸ.) :
ಆ್ಯಂಕರ್ : 2025-26 ನೇ ಸಾಲಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಇದರ ಅಧೀನದಲ್ಲಿ ಬರುವ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ತಾಂಡ ಅಭಿವೃದ್ಧಿ ನಿಗಮಗಳಿಂದ ಸ್ವಯಂ ಉದ್ಯೋಗ ನೇರಸಾಲ ಯೋಜನೆಯಲ್ಲಿ ಕಿರು ಆರ್ಥಿಕ ಚಟುವಟಿಕೆಗಳಿಗೆ, ಸ್ವಯಂ ಉದ್ಯೋಗ ನೇರಸಾಲ ಕುರಿಸಾಕಾಣಿಕೆ ಯೋಜನೆಗೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಲ್ಲಿ ಸ್ಥಾವಲಂಬಿ ಸಾರಥಿ ಯೋಜನೆ, ಫಾಸ್ಟ್‍ಪುಡ್ ಟ್ರಕ್ ಟ್ರೈಲರ್, ಮೊಬೈಲ್ ಕಿಚನ್ ಪುಡ್ ಕಿಯೋಸ್, ಹೈನುಗಾರಿಕೆ ಹಾಗೂ ಇತರೆ ಉದ್ದೇಶಗಳಿಗೆ ಸೇರಿದಂತೆ ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ, ಗಂಗಾ ಕಲ್ಯಾಣ ಯೋಜನೆಗೆ, ಭೂ ಒಡೆತನ ಯೋಜನೆಗಳನ್ನು ಅನುಷ್ಟಾನಗೊಳಿಸಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಸೆ.10 ರಂದು ಕೊನೆಯ ದಿನವಾಗಿದೆ.
ಅರ್ಹ ಫಲಾನುಭವಿಗಳು ಹತ್ತಿರದ ಸೇವಾಸಿಂಧು, ಗ್ರಾಮ್‍ಒನ್ ಮತ್ತು ಕರ್ನಾಟಕಒನ್ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕ ರಮೇಶ್ ನಾಯ್ಕ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್