ನವದೆಹಲಿ, 11 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬಿಹಾರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಮತ್ತು ಮತ ಕಳ್ಳತನದ ಆರೋಪದ ವಿಚಾರವಾಗಿ ಇಂಡಿ ಮೈತ್ರಿಕೂಟ ಸಂಸತ್ತಿನಿಂದ ಚುನಾವಣಾ ಆಯೋಗಕ್ಕೆ ಮೆರವಣಿಗೆ ನಡೆಸಿದ ಹಿನ್ನೆಲೆಯಲ್ಲಿ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಪ್ರತಿ ಪಕ್ಷಗಳ ಮೇಲೆ ವಾಗ್ದಾಳಿ ನಡೆಸಿದರು.
ರಾಹುಲ್ ಗಾಂಧಿ ಪ್ರತಿದಿನ ಸುಳ್ಳಿನ ಹೊಸ ಬೆಟ್ಟ ಸೃಷ್ಟಿಸುತ್ತಿದ್ದಾರೆ ಹಾಗೂ ಸಂವಿಧಾನ ವಿರೋಧಿ ನಡೆ ತೋರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ಸೋತರೆ ಎಲ್ಲೆಡೆ ಭ್ರಷ್ಟಾಚಾರ ಆರೋಪ ಮಾಡುವುದರ ಜೊತೆಗೆ, ಇವಿಎಂಗಳ ಬಗ್ಗೆ ಸುಳ್ಳು, ರಾಜ್ಯಗಳ ವಿಚಾರಗಳನ್ನು ಎತ್ತಿ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ. 2014ರಿಂದ ನಿರಂತರ ಸೋಲಿನಿಂದ ಕಾಂಗ್ರೆಸ್ ದಿವಾಳಿತನದ ಹಂತ ತಲುಪಿದೆ ಎಂದು ವಾಗ್ದಾಳಿ ನಡೆಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa