ವಿಜಯಪುರ, 11 ಆಗಸ್ಟ್ (ಹಿ.ಸ.) :
ಆ್ಯಂಕರ್ : ವಿಜಯಪುರ ಮಹಾನಗರ ಪಾಲಿಕೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಆಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಕಳೆದ ಹಿಂದಿನ ಒಂದು ವರ್ಷದಲ್ಲಿ (ಕಾಂಗ್ರೆಸ್ ಆಡಳಿತ) ಭ್ರಷ್ಟಾಚಾರ ಆಗಿದೆ. ಕಳೆದ ಒಂದು ವರ್ಷದಲ್ಲಿ ಏನೇನು ಭ್ರಷ್ಟಾಚಾರ ಆಗಿದೆ ಎನ್ನುವುದನ್ನು ಸರ್ಕಾರಕ್ಕೆ ಪತ್ರ ಬರೆಯುತ್ತೇನೆ. ಕಾಂಗ್ರೆಸ್ ಸರ್ಕಾರದ ಮೇಲೆ ನನಗೆ ನಂಬಿಕೆ ಇಲ್ಲ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಅಲ್ಲದೇ, ನೂತನ ಮೇಯರ್, ಉಪಮೇಯರ್ ಹಾಗೂ ನಾನು ಜನತೆಗೆ ಉತ್ತಮ ಆಡಳಿತ ನೀಡುತ್ತೇವೆ. ಕುಡಿಯುವ ನೀರು, ರಸ್ತೆ, ಮಳೆಗಾಲದಲ್ಲಿ ಪ್ರವಾಹದ ನೀರು ನಿಲ್ಲದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದರು.
ಹಿಂದೂಸ್ತಾನ್ ಸಮಾಚಾರ್ / jyothi deshpande