ಬಳ್ಳಾರಿಯ ತಾರಾನಾಥ ಕಾಲೇಜಿನಲ್ಲಿ 60 ವಿದ್ಯಾರ್ಥಿಗಳಿಗೆ ಪ್ರವೇಶ
ಬಳ್ಳಾರಿ, 12 ಆಗಸ್ಟ್ (ಹಿ.ಸ.) : ಆ್ಯಂಕರ್ : ಬಳ್ಳಾರಿಯ ತಾರಾನಾಥ ಆಯುರ್ವೇದ ಕಾಲೇಜಿನಲ್ಲಿ ಬೋಧಕರ ಕೊರತೆಯ ಕಾರಣ ವಿದ್ಯಾರ್ಥಿಗಳ ಪ್ರವೇಶ ಸಂಖ್ಯೆಯನ್ನು ಭಾರತೀಯ ವೈದ್ಯಕೀಯ ರಾಷ್ಟ್ರೀಯ ಆಯೋಗವು ಕಡಿತ ಮಾಡಿದ್ದು, ಸರ್ಕಾರ ತಕ್ಷಣವೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ, ವಿದ್ಯಾರ್ಥಿಗಳ ಪ್ರ
ಬಳ್ಳಾರಿಯ ತಾರಾನಾಥ ಕಾಲೇಜಿನಲ್ಲಿ 60 ವಿದ್ಯಾರ್ಥಿಗಳಿಗೆ ಪ್ರವೇಶ : ಶೀಘ್ರದಲ್ಲೇ ಬೋಧಕರ ನೇಮಕ


ಬಳ್ಳಾರಿ, 12 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬಳ್ಳಾರಿಯ ತಾರಾನಾಥ ಆಯುರ್ವೇದ ಕಾಲೇಜಿನಲ್ಲಿ ಬೋಧಕರ ಕೊರತೆಯ ಕಾರಣ ವಿದ್ಯಾರ್ಥಿಗಳ ಪ್ರವೇಶ ಸಂಖ್ಯೆಯನ್ನು ಭಾರತೀಯ ವೈದ್ಯಕೀಯ ರಾಷ್ಟ್ರೀಯ ಆಯೋಗವು ಕಡಿತ ಮಾಡಿದ್ದು, ಸರ್ಕಾರ ತಕ್ಷಣವೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ, ವಿದ್ಯಾರ್ಥಿಗಳ ಪ್ರವೇಶಾತಿ ಕಡಿಮೆ ಆಗದಂತೆ ತುರ್ತು ಕ್ರಮಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ವೈ.ಎಂ. ಸತೀಶ್ ಅವರು ಆಗ್ರಹಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ವೈ.ಎಂ. ಸತೀಶ್ ಅವರು ಮೇಲ್ಮನೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು, ಬಳ್ಳಾರಿಯ ತಾರಾನಾಥ ಆಯುರ್ವೇದ ಮಹಾವಿದ್ಯಾಲಯ ವಿದ್ಯಾರ್ಥಿಗಳ ಪ್ರವೇಶಾತಿ ಸೀಟನ್ನು ಹೆಚ್ಚಳ ಮಾಡಲು ಕೋರಿ ಭಾರತೀಯ ವೈದ್ಯಕೀಯ ರಾಷ್ಟ್ರೀಯ ಆಯೋಗದ ಅಧಿನಿಯಮ ಸಂಖ್ಯೆ 26(ಡಿ) ಅಡಿಯಲ್ಲಿ ತಕ್ಷಣವೇ ಮೇಲ್ಮನವಿಯನ್ನು ಸಲ್ಲಿಸಲಾಗಿದೆ.

ಅಲ್ಲದೇ, ತಾರಾನಾಥ ಆಯುರ್ವೇದ ಮಹಾವಿದ್ಯಾಲಯದಲ್ಲಿಯ ಕೊರತೆಗಳನ್ನು ತ್ವರಿತವಾಗಿ ನಿವಾರಿಸುವ ಕುರಿತು ಭಾರತೀಯ ವೈದ್ಯಕೀಯ ರಾಷ್ಟ್ರೀಯ ಆಯೋಗಕ್ಕೆ `ನೋಟರೈಸ್ಡ್ ಅಫಿಡವಿಟ್' ಅನ್ನು ಸಲ್ಲಿಸಲಾಗಿದೆ. ಭಾರತೀಯ ವೈದ್ಯಕೀಯ ರಾಷ್ಟ್ರೀಯ ಆಯೋಗವು ಸರ್ಕಾರದ ಮನವಿಯನ್ನು ಪುರಸ್ಕರಿಸಿ, ಪ್ರಸಕ್ತ 2025-26ರ ಸಾಲಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಯಥಾವತ್ತಾಗಿ 60ಕ್ಕೆ ಮಿತಿಗೊಳಿಸಿ ಆಗಸ್ಟ್ 04, 2025 ರಂದು ಆದೇಶ ಜಾರಿ ಮಾಡಿದೆ ಎಂದು ಉತ್ತರಿಸಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande