ಗದಗ, 13 ಆಗಸ್ಟ್ (ಹಿ.ಸ.) :
ಆ್ಯಂಕರ್ : ಗ್ರಾಮೀಣ ಗ್ರಂಥಾಲಯಗಳು ಸಾರ್ವಜನಿಕರ ಜ್ಞಾನದಾಹವನ್ನು ನೀಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಈ ನಿಟ್ಟಿನಲ್ಲಿ ಓದುಗರಿಗೆ ಸಹಾಯಕವಾಗುವಂತೆ ಪುಸ್ತಕಗಳೊಂದಿಗೆ, ಡಿಜಿಟಲಿಕರಣಗೊಂಡ ಸಂಪನ್ಮೂಲಗಳನ್ನು ಹಾಗೂ ಉದ್ಯೋಗ ಕುರಿತು ಮಾಹಿತಿಯನ್ನು ಒದಗಿಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಬೇಕು ಎಂದು ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ಹೇಳಿದರು.
ಗದಗ ಜಿಲ್ಲೆಯ ಮಾಚೇನಹಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಭಾವನೂರ ಗ್ರಾಮದಲ್ಲಿ ನೂತನ ಗ್ರಂಥಾಲಯ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಯಶೋದಾ ಗೋವಿಂದಗೌಡ ಪಾಟೀಲ, ಉಪಸ್ಥಿತರಿದ್ದು ಶುಭಹಾರೈಸಿ ‘ವಿದ್ಯಾವಂತ ಯುವಕರು ಗ್ರಂಥಾಲಯಗಳಲ್ಲಿ ದಿನಪತ್ರಿಕೆ, ಕಾದಂಬರಿ, ಪುಸ್ತಕ, ಸ್ವರ್ಧಾತ್ಮಕ ಪುಸ್ತಕಗಳನ್ನು ಓದುವ ಮೂಲಕ ತಮ್ಮ ಜ್ಞಾನವನ್ನು ಬೆಳಸಿಕೊಳ್ಳುತ್ತಿದ್ದರು. ಈಗ ಕಾಲ ಬದಲಾದಂತೆ ಆನ್‌ಲೈನ್ ಮೂಲಕ ವ್ಯಾಸಂಗ ಪುಸ್ತಕಗಳನ್ನು ಕಂಪ್ಯೂಟರ್‌ನಲ್ಲಿ ನೋಡಿ ಕಲಿತುಕೊಳ್ಳುವಂತಾಗಿದೆ. ವಿದ್ಯಾರ್ಥಿಗಳ ಜತೆಗೆ ಇತರರು ಇದನ್ನು ಬಳಸಿಕೊಳ್ಳುವ ಮೂಲಕ ತಮ್ಮ ಜಾನ ಹೆಚ್ಚಿಸಿಕೊಳ್ಳಬೇಕು’ ಎಂದು ನುಡಿದರು.
ನಗರಗಳಲ್ಲಿ ವಿದ್ಯಾರ್ಥಿಗಳು ಖಾಸಗಿ ಸೈಬರ್‌ನಲ್ಲಿ ಹೋಗಿ ಕಲಿಯುತ್ತಿದ್ದಾರೆ ಹಾಗೂ ಅವರಿಗೆ ಬೇಕಾಗಿರುವ ಅರ್ಜಿಗಳನ್ನು ಅಲ್ಲಿ ಸಲ್ಲಿಸುತ್ತಾರೆ. ನಗರದವರಂತೆ ಗ್ರಾಮೀಣ ಭಾಗದವರೂ ಪ್ರಸ್ತುತ ಸ್ವರ್ಧಾತ್ಮಕ ಪ್ರಪಂಚದಲ್ಲಿ ಹಿಂದುಳಿದಿದ್ದಾರೆ. ಗ್ರಾಮೀಣ ಭಾಗದವರ ಪ್ರತಿಭೆ ಹೊರತರಲು ಈ ಡಿಜಿಟಲ್ ಗ್ರಂಥಾಲಯ ಬಹಳ ಉಪಯುಕ್ತವಾಗಿದೆ’ ಎಂದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ ಕಲ್ಲೋಡರ ಮಾತನಾಡಿ, ‘ಸರ್ಕಾರ ನೀಡಿರುವ ಡಿಜಿಟಲ್ ಗ್ರಂಥಾಲಯವನ್ನು ಪ್ರತಿಯೊಬ್ಬರೂ ಉಪಯೋಗಿಸಿಕೊಳ್ಳುವ ಮೂಲಕ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿರಿ. ಕಂಪ್ಯೂಟರ್ ಮೂಲಕ ಎಲ್ಲಾ ರೀತಿಯ ಮಾಹಿತಿಗಳನ್ನು ಪಡೆಯಬಹುದು’ ಎಂದರು.
ಉಪಾಧ್ಯಕ್ಷರು. ಗ್ರಾಮ ಪಂಚಾಯತ ಸರ್ವ ಸದಸ್ಯರು, ಪಂಚಾಯತ ಸಿಬ್ಬಂದಿ, ಗ್ರಾಮಸ್ಥರು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP