ಕೋಲಾರ, ಆಗಸ್ಟ್ ೧೭ (ಹಿ.ಸ) :
ಆ್ಯಂಕರ್ : ಭಾನುವಾರ ನಡೆದ ವೇಮಗಲ್ ಕುರಗಲ್ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಮತದಾನ ಪ್ರಕ್ರಿಯಯಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಸಿಎಂ.ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕ ಕೊತ್ತೂರು ಮಂಜುನಾಥ್, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಮಾಜಿ ಸಭಾಪತಿ ವಿ.ಆರ್ ಸುದರ್ಶನ್, ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯಶಂಕರ್ ಅವರುಗಳು ಕಾಂಗ್ರೆಸ್ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಸಂವಿಧಾನ, ಪ್ರಜಾಪ್ರಭುತ್ವ, ಸೌಹಾರ್ದತೆ, ಅಭಿವೃದ್ಧಿ, ಆಡಳಿತ ವಿಕೇಂದ್ರೀಕರಣ ಮತ್ತು ಸಂಘಟನೆ ಇವುಗಳನ್ನು ಶಕ್ತಿಗೊಳಿಸುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ವ್ಯವಸ್ಥಿತವಾಗಿ ಶಾಂತಿಯುತವಾಗಿ ಚುನಾವಣಾ ಪ್ರಚಾರಗಳನ್ನು ಕೈಗೊಳ್ಳಲಾಗಿತ್ತು ಜಿಲ್ಲೆಯ ವೇಮಗಲ್ ಕುರುಗಲ್ ಚುನಾವಣಾ ಪ್ರಕ್ರಿಯೆಗಳು ಇತಿಹಾಸದ ಪುಟಗಳಲ್ಲಿ ದಾಖಲಾಗಲಿವೆ.
ಈ ಚುನಾವಣಾ ಪ್ರಚಾರಗಳಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರುಗಳ ಸರ್ಕಾರದ ಜನಪರ ಕಾರ್ಯಕ್ರಮಗಳು ಪಕ್ಷದ ಸಿದ್ಧಾಂತ ಪರಂಪರೆಯನ್ನು ಮತ್ತು ಸ್ಥಳೀಯ ಶಾಸಕರು ಮಾಡಿದ್ದ ಸಾಧನೆಗಳು ನೆರವು ಭವಿಷ್ಯದ ಐದು ವರ್ಷಗಳ ವೇಮಗಲ್ ಪಟ್ಟಣ ಪಂಚಾಯತ್ ಅಭಿವೃದ್ಧಿಗಾಗಿ ಜನತೆಯ ಮುಂದೆ ಮಂಡಿಸಿರುವ ಪ್ರಣಾಳಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರ ಮಾರ್ಗದರ್ಶನ ಮತ್ತು ಸಲಹೆ ಸೂಚನೆ ಮತ್ತು ನೆರವು ಹಾಗೇ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ಸಹಕಾರ ಮತ್ತು ಕೋಲಾರ ತಾಲೂಕು ಕಾಂಗ್ರೆಸ್ ಪಕ್ಷದ ಮುಖಂಡರು, ಪದಾಧಿಕಾರಿಗಳ ಮತ್ತು ಸದಸ್ಯರುಗಳ ಹಿತೈಷಿಗಳು ಸಕ್ರಿಯವಾಗಿ ಈ ಚುನಾವಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದ ಪರವಾಗಿ ಅಭ್ಯರ್ಥಿಗಳು ಅವರ ಕುಟುಂಬದ ಸದಸ್ಯರು, ಬೆಂಬಲಿಗರು, ಹಿತೈಷಿಗಳು ಅತ್ಯಂತ ಸಕ್ರಿಯವಾಗಿ ಚುನಾವಣೆಯ ಕರ್ತವ್ಯವನ್ನು ನಿರ್ವಹಿಸಿದ್ದಾರೆ ಕಾಂಗ್ರೆಸ್ ಪಕ್ಷದ ಪರವಾಗಿ ಮತ ಚಲಾಯಿಸಿದ ಎಲ್ಲಾ ಮತದಾರರಿಗೆ ವಿಶೇಷವಾಗಿ ಅಭಿನಂದನೆ ಸಲ್ಲಿಸುತ್ತಿದೇವೆ ಮತದಾರರ ನಾಡಿ ಮಿಡಿತ ಸಾರ್ವಜನಿಕರ ಅಭಿಪ್ರಾಯ ಮಾಧ್ಯಮ ಕ್ಷೇತ್ರದ ಸಹಕಾರ ಅಭಿಪ್ರಾಯದ ಹಿನ್ನೆಲೆಯಲ್ಲಿ ಆ.೨೦ ರಂದು ಹೊರಬರುವ ಪಟ್ಟಣ ಪಂಚಾಯಿತಿಯ ಫಲಿತಾಂಶವು ನಿಚ್ಚಳವಾಗಿ ಕಾಂಗ್ರೆಸ್ ಪಕ್ಷಕ್ಕೆ ಮತದಾರರು ಆಶೀರ್ವಾದ ಮಾಡಿ ಅಧಿಕಾರದ ಜವಾಬ್ದಾರಿ ಸ್ಥಾನಕ್ಕೆ ಬರಲಿದೆ ಮುಂದಿನ ೫ ವರ್ಷಗಳಲ್ಲಿ ಜನತೆಯ ಸಹಕಾರದೊಂದಿಗೆ ಸರ್ಕಾರದ ನೆರವು ಮಾರ್ಗದರ್ಶದೊಂದಿಗೆ ಪ್ರಣಾಳಿಕೆಯಲ್ಲಿ ತಿಳಿಸಿರುವ ಅಂಶಗಳನ್ನು ಜಾರಿಗೊಳಿಸಲು ಪ್ರಯತ್ನಿಸಲಾಗುವುದು ಈ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಹಾಗೆ ಜಿಲ್ಲಾಡಳಿತಕ್ಕೆ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೂ ಕಾಂಗ್ರೆಸ್ ಪಕ್ಷದ ಪರವಾಗಿ ಧನ್ಯವಾದಗಳು ತಿಳಿಸಿದ್ದಾರೆ.
ಚಿತ್ರ : ಕಾಂಗ್ರೆಸ್ ಪರವಾಗಿ ಅಭಿನಂದನೆ
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್