ಕೋಲಾರ, ೧೭ ಆಗಸ್ಟ್ (ಹಿ.ಸ) :
ಆ್ಯಂಕರ್ : ತಾಲ್ಲೂಕಿನ ನರಸಾಪುರ ಗ್ರಾಮದ ವ್ಯಾಲಿ ಪಬ್ಲಿಕ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಶಾಲೆಯ ಸಂಸ್ಥಾಪಕ ಜಿ.ಗೋಪಾಲರೆಡ್ಡಿ ಮಾತನಾಡಿ ಕೃಷ್ಣ ಜನ್ಮಾಷ್ಟಮಿ ಪ್ರೀತಿ, ಭಕ್ತಿ ಮತ್ತು ಭಗವಂತನ ಮೇಲಿನ ನಂಬಿಕೆಯ ಹಬ್ಬವಾಗಿದೆ. ಭಕ್ತರು ಕೃಷ್ಣನಿಗೆ ಪ್ರೀತಿ ಮತ್ತು ಭಕ್ತಿಯಿಂದ ಪೂಜೆ ಸಲ್ಲಿಸುತ್ತಾರೆ, ಅವನಿಗೆ ಪ್ರಿಯವಾದ ವಸ್ತುಗಳನ್ನು ಅರ್ಪಿಸುತ್ತಾರೆ ಮತ್ತು ಅವನ ಗುಣಗಳನ್ನು ನೆನಪಿಸಿಕೊಳ್ಳುತ್ತಾರೆ ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲೆಯ ಪುಟಾಣಿ ಮಕ್ಕಳು ರಾಧೆ-ಕೃಷ್ಣರ ವೇಷಭೂಷಣ ಧರಿಸಿ ಕಣ್ಮನ ಸೆಳೆದರು ಹಾಗೂ ಪುಟಾಣಿ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು ಶಾಲೆಯ ಮುಖ್ಯ ಶಿಕ್ಷಕಿ ಸುಮಾ, ಕಾರ್ಯದರ್ಶಿ ಪಿ.ರವಿಕುಮಾರ್, ಪ್ರಾಂಶುಪಾಲ ಲಾಲ್ ದೀಪ್ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪೋಷಕರು ಇದ್ದರು.
ಚಿತ್ರ : ವ್ಯಾಲಿ ಪಬ್ಲಿಕ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್