ಬೆಳಗಾವಿ ಜಿಲ್ಲೆಯ 5 ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಬೆಳಗಾವಿ, 18 ಆಗಸ್ಟ್ (ಹಿ.ಸ.) : ಆ್ಯಂಕರ್ : ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯ ಐದು ತಾಲೂಕುಗಳ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಬೆಳಗಾವಿ, ಕಿತ್ತೂರು, ಬೈಲಹೊಂಗಲ, ಸವದತ್ತಿ ಹಾಗೂ ಖಾ
ಬೆಳಗಾವಿ ಜಿಲ್ಲೆಯ 5 ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ


ಬೆಳಗಾವಿ, 18 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯ ಐದು ತಾಲೂಕುಗಳ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ, ಕಿತ್ತೂರು, ಬೈಲಹೊಂಗಲ, ಸವದತ್ತಿ ಹಾಗೂ ಖಾನಾಪುರ ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕಳೆದ ರಾತ್ರಿಯಿಡೀ ಧಾರಾಕಾರ ಮಳೆ ಸುರಿದಿದೆ. ಅದೇ ರೀತಿ ಬೆಳಿಗ್ಗೆಯಿಂದಲೂ ಮಳೆ ಮುಂದುವರಿದಿದೆ ಹೀಗಾಗಿ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande