ಪ್ರಧಾನಿ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ
ನವದೆಹಲಿ, 18 ಆಗಸ್ಟ್ (ಹಿ.ಸ.) : ಆ್ಯಂಕರ್ : ಉಪ ರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯಾಗಿರುವ ಸಿ.ಪಿ. ರಾಧಾಕೃಷ್ಣನ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ಭೇಟಿಯಾದರು. ಪ್ರಧಾನಿ ಮೋದಿ ಅವರು ರಾಧಾಕೃಷ್ಣನ್ ಅವರನ್ನು ಅಭಿನಂದಿಸಿ ಸಾರ್ವಜನಿಕ ಜೀವನದಲ್ಲಿ ಅವರ ದೀರ್ಘ ಅನುಭವ ಮತ್ತು
Meet


ನವದೆಹಲಿ, 18 ಆಗಸ್ಟ್ (ಹಿ.ಸ.) :

ಆ್ಯಂಕರ್ : ಉಪ ರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯಾಗಿರುವ ಸಿ.ಪಿ. ರಾಧಾಕೃಷ್ಣನ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ಭೇಟಿಯಾದರು.

ಪ್ರಧಾನಿ ಮೋದಿ ಅವರು ರಾಧಾಕೃಷ್ಣನ್ ಅವರನ್ನು ಅಭಿನಂದಿಸಿ ಸಾರ್ವಜನಿಕ ಜೀವನದಲ್ಲಿ ಅವರ ದೀರ್ಘ ಅನುಭವ ಮತ್ತು ಹಲವಾರು ಕ್ಷೇತ್ರಗಳಲ್ಲಿ ಸಲ್ಲಿಸಿದ ಕೊಡುಗೆ ದೇಶಕ್ಕೆ ಅಮೂಲ್ಯ ಎಂದು ಶ್ಲಾಘಿಸಿದರು.

ಈ ಕುರಿತು ತಮ್ಮ ಎಕ್ಸ್ ಪೋಸ್ಟ್‌ನಲ್ಲಿ, ಪ್ರಧಾನಿ ಅವರು ರಾಧಾಕೃಷ್ಣನ್ ಅವರು ಯಾವಾಗಲೂ ತೋರಿಸಿದ ಸಮರ್ಪಣೆ ಮತ್ತು ದೃಢಸಂಕಲ್ಪದಿಂದ ಮುಂದುವರಿದು ರಾಷ್ಟ್ರಕ್ಕೆ ಸೇವೆ ಸಲ್ಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಧಾಕೃಷ್ಣನ್ ಕೂಡ ತಮ್ಮ ಪೋಸ್ಟ್‌ನಲ್ಲಿ ನಮ್ಮ ಪ್ರೀತಿಯ ನಾಯಕ, ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿರುವುದು ನನಗೆ ಧನ್ಯ ಹಾಗೂ ಗೌರವದ ಕ್ಷಣ ಎಂದು ಸಂದೇಶ ಹಂಚಿಕೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande