ಇಂದು ನಾಳೆ ಉಡುಪಿ ಜಿಲ್ಲೆಗೆ ಕೆಂಪು ಎಚ್ಚರಿಕೆ
ಉಡುಪಿ, 18 ಆಗಸ್ಟ್ (ಹಿ.ಸ.) : ಆ್ಯಂಕರ್ : ಉಡುಪಿ ಜಿಲ್ಲೆಯಲ್ಲಿ ಮುಂದಿನ 5 ದಿನಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಇಂದು ಮತ್ತೆ ನಾಳೆ ಜಿಲ್ಲೆಗೆ ಕೆಂಪು ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯ ಅಂಗನವಾಡಿ, ಪ್ರಾಥಮ
ಇಂದು ನಾಳೆ ಉಡುಪಿ ಜಿಲ್ಲೆಗೆ ಕೆಂಪು ಎಚ್ಚರಿಕೆ


ಉಡುಪಿ, 18 ಆಗಸ್ಟ್ (ಹಿ.ಸ.) :

ಆ್ಯಂಕರ್ : ಉಡುಪಿ ಜಿಲ್ಲೆಯಲ್ಲಿ ಮುಂದಿನ 5 ದಿನಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಇಂದು ಮತ್ತೆ ನಾಳೆ ಜಿಲ್ಲೆಗೆ ಕೆಂಪು ಎಚ್ಚರಿಕೆ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ರಜೆ ಘೋಷಣೆ ಮಾಡಿದ್ದಾರೆ.

ಈ ಎರಡು ದಿನ ಅರಬ್ಬಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಇರಲಿದ್ದು, ಸಮುದ್ರದ ಅಲೆಗಳ ಎತ್ತರವು ಹೆಚ್ಚಾಗಿರುತ್ತದೆ. ಸಾರ್ವಜನಿಕರು, ಪ್ರವಾಸಿಗರು, ಮೀನುಗಾರರು ನದಿ ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಸಾರ್ವಜನಿಕರು, ಮಕ್ಕಳು, ಕಾರ್ಮಿಕರು ಮಳೆ ಗಾಳಿ ಸಿಡಿಲು ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯಬೇಕು. ಕೃಷಿಕರು ಮಳೆ ಸಿಡಿಲಿನಂತಹ ಸಂದರ್ಭದಲ್ಲಿ ಹೊರಗಿನ ಕೃಷಿ ಚಟುವಟಿಕೆಯಿಂದ ದೂರವಿರಬೇಕು ಎಂದು ಸೂಚಿಸಲಾಗಿದೆ.

ಕೆಲವು ಪ್ರದೇಶಗಳಲ್ಲಿ ಭೂಕುಸಿತವಾಗುವ ಸಂಭವ ಹೆಚ್ಚಾಗಿರುತ್ತದೆ. ಹಾಗಾಗಿ, ಇಂತಹ ಪ್ರದೇಶದಲ್ಲಿ ವಾಸಿಸುವ ಸಾರ್ವಜನೀಕರು ತಹಶೀಲ್ದಾರರ ಕಛೇರಿ ಅಥವಾ ಗ್ರಾಮ ಪಂಚಾಯಿತಿ ಸಿಬ್ಬಂದಿಯನ್ನು ಸಂಪರ್ಕಿಸಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಸಾಕಷ್ಟು ಮುಂಚಿತವಾಗಿಯೇ ಉಳಿಯಬಹುದು.

ಜನರು ದುರ್ಬಲ ಕಟ್ಟಡದಲ್ಲಿ ವಾಸವಿದ್ದಲ್ಲಿ ಅಥವಾ ಅಗತ್ಯವಿದ್ದರೆ ಮುಂಜಾಗೃತ ಕ್ರಮವಾಗಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಉಳಿಯಬಹುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande