ಬೆಂಗಳೂರು, 24 ಆಗಸ್ಟ್ (ಹಿ.ಸ.) :
ಆ್ಯಂಕರ್ : ದರ್ಶನ್ ನಟನೆಯ ಡೆವಿಲ್ ಚಿತ್ರದ ಮೊದಲ ಹಾಡು ಇದ್ದರೆ ನೆಮ್ಮದಿಯಾಗಿ ಇರಬೇಕು ಇಂದು ಬಿಡುಗಡೆ ಆಗಿದೆ. ಅಜನೀಶ್ ಲೋಕನಾಥ್ ಸಂಗೀತದಲ್ಲಿ, ದೀಪಕ್ ಬ್ಲೂ ಕಂಠದ ಈ ಹಾಡು ದರ್ಶನ್ ಅಭಿಮಾನಿಗಳಲ್ಲಿ ಸಂಭ್ರಮ ಹುಟ್ಟಿಸಿದೆ.
ಈ ಮೊದಲು ಆಗಸ್ಟ್ 15ರಂದು ಹಾಡು ಬಿಡುಗಡೆ ಮಾಡುವ ಯೋಜನೆ ರೂಪಿಸಿಕೊಂಡಿತ್ತು, ಆದರೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ಗೆ ಸುಪ್ರೀಂ ಕೋರ್ಟ್ ಜಾಮೀನು ರದ್ದುಪಡಿಸಿದ ಹಿನ್ನೆಲೆಯಲ್ಲಿ ಆಗಸ್ಟ್ 14ರಂದು ಅವರು ಮತ್ತೆ ಜೈಲಿಗೆ ಹೋದ ಕಾರಣ ಬಿಡುಗಡೆ ತಡವಾಯಿತು.
ಕೊನೆಗೂ ನಿರ್ದೇಶಕ ಪ್ರಕಾಶ್ ವೀರ್, ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಜೊತೆ ಚರ್ಚಿಸಿ ಹಾಡು ಬಿಡುಗಡೆ ಮಾಡಿದ್ದಾರೆ.
ಹಾಡಿನ ಮೂಲಕ ಡೆವಿಲ್ ಚಿತ್ರದ ಪ್ರಚಾರಕ್ಕೆ ಚಾಲನೆ ಸಿಕ್ಕಿದ್ದು, ಅಭಿಮಾನಿಗಳು ಖುಷಿಪಟ್ಟರೂ ದರ್ಶನ್ ಜೈಲಿನಲ್ಲಿರುವುದು ಅಭಿಮಾನಿಗಳಿಗೆ ಸಂಕಟ ತಂದಿದೆ.
ಸಿನಿಮಾದ ಚಿತ್ರೀಕರಣ ಸಂಪೂರ್ಣ ಮುಗಿದಿದ್ದು, ದರ್ಶನ್ ಇಲ್ಲದೇ ಸಿನಿಮಾ ಬಿಡುಗಡೆಗೆ ಚಿತ್ರ ತಂಡ ಸಿದ್ದತೆ ಮಾಡಿಕೊಂಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa