ಬೆಂಗಳೂರು, 25 ಆಗಸ್ಟ್ (ಹಿ.ಸ.) :
ಆ್ಯಂಕರ್ : ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರ ನಟ ಹಾಗೂ ಕಲಾ ನಿರ್ದೇಶಕ ದಿನೇಶ್ ಮಂಗಳೂರು ಇಂದು ಬೆಳಗಿನ ಜಾವ ಕುಂದಾಪುರದಲ್ಲಿ ನಿಧನರಾದರು.
ಕನ್ನಡ ಚಿತ್ರರಂಗದ ಪೋಷಕ ನಟರಾಗಿ ತಮ್ಮದೇ ಆದ ಖ್ಯಾತಿ ಗಳಿಸಿದ್ದ ದಿನೇಶ್ ಮಂಗಳೂರು, ರಿಕ್ಕಿ, ಉಳಿದವರು ಕಂಡಂತೆ, ಕೆಜಿಎಫ್ ಚಾಪ್ಟರ್ 1, ಕೆಜಿಎಫ್ ಚಾಪ್ಟರ್ 2, 777 ಚಾರ್ಲಿ ಸೇರಿದಂತೆ ಅನೇಕ ಜನಪ್ರಿಯ ಚಿತ್ರಗಳಲ್ಲಿ ಅಭಿನಯಿಸಿದ್ದರು.
ಇಂದು ಸಂಜೆ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗುತ್ತಿದೆ. ನಾಳೆ ಸುಮನಹಳ್ಳಿ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ನಟನ ಅಗಲಿಕೆಗೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa