ನವದೆಹಲಿ, 27 ಆಗಸ್ಟ್ (ಹಿ.ಸ.) :
ಆ್ಯಂಕರ್ : ದೇಶದ ಚಿನಿವಾರ ಮಾರುಕಟ್ಟೆಯಲ್ಲಿ ಗಣೇಶ ಚತುರ್ಥಿ ಹಬ್ಬದಂದು ಚಿನ್ನದ ಬೆಲೆ ಏರಿಕೆಯಾಗಿದ್ದು, ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ.
ಇಂದು ದೇಶದ ಹೆಚ್ಚಿನ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹1,02,440ರಿಂದ ₹1,02,590ರ ಒಳಗೆ ಮಾರಾಟವಾಗುತ್ತಿದೆ. ಇದೇ ವೇಳೆ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹93,900ರಿಂದ ₹94,050ರವರೆಗೆ ದಾಖಲಾಗಿದೆ. ಆದರೆ ಬೆಳ್ಳಿ ದರದಲ್ಲಿ ಬದಲಾವಣೆ ಆಗದೇ, ದೆಹಲಿಯ ಮಾರುಕಟ್ಟೆಯಲ್ಲಿ ಪ್ರತಿಕಿಲೋಗ್ರಾಂಗೆ ₹1,20,000ರಲ್ಲಿ ಮಾರಾಟ ಮುಂದುವರಿದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa