ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಿರೂಪಕಿ ಅನುಶ್ರೀ
ಬೆಂಗಳೂರು, 28 ಆಗಸ್ಟ್ (ಹಿ.ಸ.) : ಆ್ಯಂಕರ್ : ಕನ್ನಡದ ಜನಪ್ರಿಯ ನಿರೂಪಕಿ ಹಾಗೂ ನಟಿ ಅನುಶ್ರೀ ಇಂದು ಕೊಡಗು ಮೂಲದ ರೋಷನ್ ಜೊತೆ ಹಸೆಮಣೆ ಏರಿದ್ದಾರೆ. ಬೆಳಿಗ್ಗೆ 10:56ರ ಶುಭ ಮುಹೂರ್ತದಲ್ಲಿ ಬೆಂಗಳೂರಿನ ಕಗ್ಗಲಿಪುರ ಬಳಿಯ ರೆಸಾರ್ಟ್‌ನಲ್ಲಿ ಮದುವೆ ನೆರವೇರಿತು. ಕಿರುತೆರೆಯ ಕಲಾವಿದರು, ಚಿತ್ರರಂಗದ ಗಣ
Anushree


Anushree


ಬೆಂಗಳೂರು, 28 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕನ್ನಡದ ಜನಪ್ರಿಯ ನಿರೂಪಕಿ ಹಾಗೂ ನಟಿ ಅನುಶ್ರೀ ಇಂದು ಕೊಡಗು ಮೂಲದ ರೋಷನ್ ಜೊತೆ ಹಸೆಮಣೆ ಏರಿದ್ದಾರೆ.

ಬೆಳಿಗ್ಗೆ 10:56ರ ಶುಭ ಮುಹೂರ್ತದಲ್ಲಿ ಬೆಂಗಳೂರಿನ ಕಗ್ಗಲಿಪುರ ಬಳಿಯ ರೆಸಾರ್ಟ್‌ನಲ್ಲಿ ಮದುವೆ ನೆರವೇರಿತು. ಕಿರುತೆರೆಯ ಕಲಾವಿದರು, ಚಿತ್ರರಂಗದ ಗಣ್ಯರು ನವಜೋಡಿಗೆ ಶುಭ ಹಾರೈಸಿದರು.

ಮದುವೆಯ ಮುನ್ನಾ ದಿನ ನಡೆದ ಹಳದಿ ಶಾಸ್ತ್ರದಲ್ಲಿ ಅನುಶ್ರೀ–ರೋಷನ್ ಹಳದಿ ಉಡುಪಿನಲ್ಲಿ ಮಿಂಚಿ, ಹಾಡು-ನೃತ್ಯದಲ್ಲಿ ಸಂಭ್ರಮ ಹಂಚಿಕೊಂಡಿದ್ದರು. ಮದುವೆ ಹಾಗೂ ಹಳದಿ ಶಾಸ್ತ್ರದ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆಯಾಗಿವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande