ಬಳ್ಳಾರಿ : ಇಸ್ಪೀಟ್ ಜೂಜಾಟದ ಮೇಲೆ ದಾಳಿ ; 46 ಜನರ ವಿರುದ್ಧ ಪ್ರಕರಣ ದಾಖಲು
ಬಳ್ಳಾರಿ, 28 ಆಗಸ್ಟ್ (ಹಿ.ಸ.) : ಆ್ಯಂಕರ್ : ಬಳ್ಳಾರಿಯ ಕೌಲ್‍ಬಜಾರ್ ಪೊಲೀಸ್ ಠಾಣೆಯ ವ್ಯಾಪ್ತಿಯ `ಮನಪ್ರಭಾ ಪ್ರಾಜೆಕ್ಸ್'' ಕಟ್ಟಡದ 3ನೇ ಮಹಡಿಯಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ಜಂಟಿಯಾಗಿ ದಾಳಿ ನಡ
ಬಳ್ಳಾರಿ : ಇಸ್ಪೀಟ್ ಜೂಜಾಟದ ಮೇಲೆ ದಾಳಿ : 46 ಜನರ ವಿರುದ್ಧ ಪ್ರಕರಣ ದಾಖಲು


ಬಳ್ಳಾರಿ : ಇಸ್ಪೀಟ್ ಜೂಜಾಟದ ಮೇಲೆ ದಾಳಿ : 46 ಜನರ ವಿರುದ್ಧ ಪ್ರಕರಣ ದಾಖಲು


ಬಳ್ಳಾರಿ : ಇಸ್ಪೀಟ್ ಜೂಜಾಟದ ಮೇಲೆ ದಾಳಿ : 46 ಜನರ ವಿರುದ್ಧ ಪ್ರಕರಣ ದಾಖಲು


ಬಳ್ಳಾರಿ, 28 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬಳ್ಳಾರಿಯ ಕೌಲ್‍ಬಜಾರ್ ಪೊಲೀಸ್ ಠಾಣೆಯ ವ್ಯಾಪ್ತಿಯ `ಮನಪ್ರಭಾ ಪ್ರಾಜೆಕ್ಸ್' ಕಟ್ಟಡದ 3ನೇ ಮಹಡಿಯಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿ, 46 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ದಾಳಿಯ ಸಂದರ್ಭದಲ್ಲಿ ಪೊಲೀಸರು 46 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಅವರಿಂದ 1,93,800 ರೂಪಾಯಿ ನಗದು ಹಣ, 38 ಮೊಬೈಲ್ ಫೋನ್‍ಗಳು, ಇಸ್ಪೇಟ್ ಆಟದ ಸಾಮಾಗ್ರಿಗಳು ಇನ್ನಿತರೆಗಳನ್ನು ವಶಕ್ಕೆ ಪಡೆದುಕೊಮಡಿದ್ದಾರೆ.

ದಾಳಿಯ ನೇತೃತ್ವವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ. ಮತ್ತು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಜಂಟಿ ನೇತೃತ್ವ ವಹಿಸಿದ್ದು ವಿಶೇಷವಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande