ಬೆಂಗಳೂರು, 29 ಆಗಸ್ಟ್ (ಹಿ.ಸ.) :
ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26ನೇ ಸಾಲಿನ ಬೆಂಗಳೂರು ನಗರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 11 ಮತ್ತು 12 ರಂದು ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಈ ಬಾರಿ ಅಥ್ಲೆಟಿಕ್ಸ್, ಕುಸ್ತಿ, ಬ್ಯಾಡ್ಮಿಂಟನ್, ವಾಲಿಬಾಲ್, ಫುಟ್ಬಾಲ್, ಹಾಕಿ, ಈಜು ಸೇರಿದಂತೆ ಗುಂಪು ಮತ್ತು ವೈಯುಕ್ತಿಕವಾಗಿ ಒಟ್ಟು 20ಕ್ಕೂ ಹೆಚ್ಚು ಕ್ರೀಡೆಗಳನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಪ್ರಮಾಣಪತ್ರ, ಪದಕ ಹಾಗೂ ಟ್ರೋಫಿ ನೀಡಲಾಗುವುದು. ವಿಭಾಗ ಮಟ್ಟದಲ್ಲಿ ಗೆದ್ದ ಕ್ರೀಡಾಪಟುಗಳು ಮೈಸೂರಿನ ರಾಜ್ಯಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಲಿದ್ದಾರೆ.
ಭಾಗವಹಿಸುವ ಕ್ರೀಡಾಪಟುಗಳು ತಮ್ಮ ಗುರುತಿನ ಚೀಟಿಗಳು ಹಾಗೂ 2 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳನ್ನು ತರಬೇಕಾಗಿದ್ದು, ಸೆಪ್ಟೆಂಬರ್ 8ರೊಳಗೆ dasaracmcup-2025.etrpindia.com ಪೋರ್ಟಲ್‌ನಲ್ಲಿ ಆನ್‌ಲೈನ್ ನೋಂದಣಿ ಕಡ್ಡಾಯವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರನ್ನು (ದೂ: 080-22239771, ಮೊ: 9480886545 / 7204266766) ಸಂಪರ್ಕಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa