ಆಂತರಿಕ ದೂರು ಸಮಿತಿ ರಚನೆ ಕಡ್ಡಾಯ
ಹುಬ್ಬಳ್ಳಿ, 29 ಆಗಸ್ಟ್ (ಹಿ.ಸ.) : ಆ್ಯಂಕರ್ : ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ, (ನಿಷೇಧಿಸುವಿಕೆ ಮತ್ತು ನಿವಾರಿಸುವಿಕೆ) ಕಾಯ್ದೆಯ ಅನುಷ್ಠಾನಕ್ಕಾಗಿ ಸುಪ್ರೀಂ ಕೋರ್ಟ್ ಆದೇಶದಂತೆ, 10ಕ್ಕಿಂತ ಹೆಚ್ಚು ಕಾರ್ಮಿಕರನ್ನು ಹೊಂದಿರುವ ಸಂಸ್ಥೆಯ ಮಾಲೀಕರು, ಸಂಸ್ಥೆಯಲ್ಲಿ ಆ
ಆಂತರಿಕ ದೂರು ಸಮಿತಿ ರಚನೆ ಕಡ್ಡಾಯ


ಹುಬ್ಬಳ್ಳಿ, 29 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ, (ನಿಷೇಧಿಸುವಿಕೆ ಮತ್ತು ನಿವಾರಿಸುವಿಕೆ) ಕಾಯ್ದೆಯ ಅನುಷ್ಠಾನಕ್ಕಾಗಿ ಸುಪ್ರೀಂ ಕೋರ್ಟ್ ಆದೇಶದಂತೆ, 10ಕ್ಕಿಂತ ಹೆಚ್ಚು ಕಾರ್ಮಿಕರನ್ನು ಹೊಂದಿರುವ ಸಂಸ್ಥೆಯ ಮಾಲೀಕರು, ಸಂಸ್ಥೆಯಲ್ಲಿ ಆಂತರಿಕ ದೂರು ಸಮಿತಿ ರಚಿಸುವುದು ಕಡ್ಡಾಯವಾಗಿದೆ.

ಹಲವು ಸಂಸ್ಥೆಗಳು ಈವರೆಗೂ ಆಂತರಿಕ ಸಮಿತಿ ರಚಿಸಿರುವುದಿಲ್ಲ ಮತ್ತು ರಚಿಸಿರುವ ಬಗ್ಗೆ ಮಾಹಿತಿ ನೀಡಿರುವುದಿಲ್ಲ. ನ್ಯಾಯಾಲಯದ ನಿರ್ದೆಶನದಂತೆ ಆಂತರಿಕ ದೂರು ಸಮಿತಿ ರಚಿಸಿ, ಆದೇಶದ ಪ್ರತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಧಾರವಾಡ ಮತ್ತು ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿ, 3ನೇ ವೃತ್ತ, ಕಾರ್ಮಿಕ ಭವನ, 3ನೇ ಮಹಡಿ, ಚೈತನ್ಯನಗರ, ಪ್ರಿಯದರ್ಶಿನಿ ಕಾಲೋನಿ ಅಕ್ಷಯ ಪಾರ್ಕ್, ಹುಬ್ಬಳ್ಳಿ ಕಚೇರಿಗೆ ಸಲ್ಲಿಸಬೇಕೆಂದು ಕಾರ್ಮಿಕ ಇಲಾಖೆಯ ಹಿರಿಯ ಕಾರ್ಮಿಕ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande