ಬೆಂಗಳೂರು, 29 ಆಗಸ್ಟ್ (ಹಿ.ಸ.) :
ಆ್ಯಂಕರ್ : ಧರ್ಮಸ್ಥಳ ಕ್ಷೇತ್ರದ ಪ್ರಕರಣ ಸಮಗ್ರ ತನಿಖೆಗೆ ಎನ್ಐಎ ಅಥವಾ ಸಿಬಿಐಗೆ ವಹಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಧರ್ಮಸ್ಥಳ ಕ್ಷೇತ್ರದ ವಿರುದ್ಧವಿರುವ ದುಷ್ಟ ಶಕ್ತಿಗಳನ್ನು ಸದೆ ಬಡಿಯುವ ಕೆಲಸವಾಗಬೇಕು. ಷಡ್ಯಂತ್ರ ಮಾಡಿದ್ದು ಯಾರು? ಅಪಪ್ರಚಾರ ಮಾಡಿದ್ದು ಯಾರು? ದುಷ್ಟ ಶಕ್ತಿಗಳಿಗೆ ಹಣ ಕೊಟ್ಟವರು ಯಾರು? ಇವೆಲ್ಲದರ ಬಗ್ಗೆ ಸಮಗ್ರ ತನಿಖೆಗಾಗಿ ರಾಜ್ಯ ಸರ್ಕಾರ ಈ ಪ್ರಕರಣವನ್ನು ಎನ್‌ಐಎ ಅಥವಾ ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಸೆಪ್ಟೆಂಬರ್ 1 ರಂದು ಧರ್ಮಸ್ಥಳ ಚಲೋ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ
ಧರ್ಮ ರಕ್ಷಣೆಯ ಕಾರ್ಯದಲ್ಲಿ ಸಮಸ್ತ ಹಿಂದೂ ಸಮಾಜ ಒಟ್ಟಾಗೋಣ. ಧರ್ಮಸ್ಥಳ ಚಲೋ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa