ವಿಶೇಷ ಆಧಾರ ಜೋಡಣೆ ಅಭಿಯಾನ
ಬೆಂಗಳೂರು, 29 ಆಗಸ್ಟ್ (ಹಿ.ಸ.) : ಆ್ಯಂಕರ್ : ಬೆಂಗಳೂರು ನಗರ ಜಿಲ್ಲೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ಮಂಜೂರು ಮಾಡಲು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗದೇ ಬಾಕಿ ಇರುವ ಅರ್ಜಿಗಳಿಗೆ ಆಧಾರ್ ಸ
ವಿಶೇಷ ಆಧಾರ ಜೋಡಣೆ ಅಭಿಯಾನ


ಬೆಂಗಳೂರು, 29 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬೆಂಗಳೂರು ನಗರ ಜಿಲ್ಲೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ಮಂಜೂರು ಮಾಡಲು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗದೇ ಬಾಕಿ ಇರುವ ಅರ್ಜಿಗಳಿಗೆ ಆಧಾರ್ ಸೀಡಿಂಗ್ ಮಾಡುವ ಕಾರ್ಯವನ್ನು ಪೂರ್ವಗೊಳಿಸಲು ಸೆಪ್ಟೆಂಬರ್ 07,2025ರವರೆಗೆ “ವಿಶೇಷ ಆಧಾರ್ ಸೀಡಿಂಗ್ ಅಭಿಯಾನ “ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಆಧಾರ್ ಸೀಡಿಂಗ್ ಆಗದೇ ಇರುವ ವಿದ್ಯಾರ್ಥಿಗಳು www.npci.org.in ಗೆ ಭೇಟಿ ನೀಡಿ ಆಧಾರ್ ಸೀಡಿಂಗ್ ಮಾಡಿಕೊಂಡು ವಿದ್ಯಾರ್ಥಿವೇತನ ಸೌಲಭ್ಯವನ್ನು ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಎಸ್. ಕರಿಯಪ್ಪ ರಸ್ತೆ, ಕನಕಪುರ ಮುಖ್ಯರಸ್ತೆ, ಬನಶಂಕರಿ, ಬೆಂಗಳೂರು ಇಲ್ಲಿ ಕಛೇರಿ ಅವಧಿಯಲ್ಲಿ ಅಥವಾ ದೂರವಾಣಿ ಸಂಖ್ಯೆ: 080-29711096 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ತಾಲ್ಲೂಕು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande