ಗೊಂಡಾ, 03 ಆಗಸ್ಟ್ (ಹಿ.ಸ.) :
ಆ್ಯಂಕರ್ : ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಭಾನುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ಮೃತಪಟ್ಟಿದ್ದಾರೆ. 15 ಜನರನ್ನು ಕೊಂಡೊಯ್ಯುತ್ತಿದ್ದ ಬೊಲೆರೊ ವಾಹನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದೆ.
ಘಟನೆ ಇಟಿಯಾಥೋಕ್ ಪೊಲೀಸ್ ಠಾಣೆ ವ್ಯಾಪ್ತಿಯ ರೆಹ್ರಾ-ಬೆಲ್ವಾ-ಬಹುತಾ ಕಾಲುವೆ ಬಳಿ ನಡೆದಿದೆ. ಘಟನೆಯಲ್ಲಿ ನಾಲ್ವರನ್ನು ರಕ್ಷಿಸಲಾಗಿದ್ದು, ಮೂವರು ಮಕ್ಕಳು ಮತ್ತು ಚಾಲಕನನ್ನು ಜೀವಂತವಾಗಿ ಹೊರತೆಗೆಯಲಾಗಿದೆ. ಉಳಿದವರ ಮೃತದೇಹಗಳನ್ನು ಕಾಲುವೆಯಿಂದ ಹೊರತೆಗೆಯುವ ಕಾರ್ಯ ಮುಂದುವರಿದಿದೆ.
ಅಪಘಾತದ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿ, ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಅಧಿಕಾರಿಗಳಿಗೆ ತುರ್ತು ರಕ್ಷಣಾ ಕಾರ್ಯಾಚರಣೆ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa