ಬಳ್ಳಾರಿ ವಿವಿಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ
ಬಳ್ಳಾರಿ, 30 ಆಗಸ್ಟ್ (ಹಿ.ಸ.) : ಆ್ಯಂಕರ್ : ನಮ್ಮ ಸಮಾಜ ಆರೋಗ್ಯಯುತವಾಗಿರಲು ಕ್ರೀಡಾ ಚಟುವಟಿಕೆಗಳು ಪ್ರತಿಯೊಬ್ಬರಿಗೂ ಅವಶ್ಯಕ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೋ.ಎಂ.ಮುನಿರಾಜು ಅವರು ಹೇಳಿದ್ದಾರೆ. ನಗರದ ಹೊರವಲಯದ ವಿ ಶ್ರೀ ಕೃ ದೇ ವಿಶ್ವವಿದ್ಯಾಲಯದಲ್ಲಿ ಹಮ್
ಬಳ್ಳಾರಿ:  ವಿವಿಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ


ಬಳ್ಳಾರಿ:  ವಿವಿಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ


ಬಳ್ಳಾರಿ, 30 ಆಗಸ್ಟ್ (ಹಿ.ಸ.) :

ಆ್ಯಂಕರ್ : ನಮ್ಮ ಸಮಾಜ ಆರೋಗ್ಯಯುತವಾಗಿರಲು ಕ್ರೀಡಾ ಚಟುವಟಿಕೆಗಳು ಪ್ರತಿಯೊಬ್ಬರಿಗೂ ಅವಶ್ಯಕ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೋ.ಎಂ.ಮುನಿರಾಜು ಅವರು ಹೇಳಿದ್ದಾರೆ.

ನಗರದ ಹೊರವಲಯದ ವಿ ಶ್ರೀ ಕೃ ದೇ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ ಅವರ ಜನ್ಮದಿನದ ಸ್ಮರಣಾರ್ಥ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರೂ ಕೂಡ ಯಾವುದಾದರು ಒಂದು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ಮಾತ್ರ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕವಾಗಿ ಸದೃಢÀವಾಗಿರಲು ಸಾಧ್ಯ. ಎಲ್ಲರೂ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಕ್ರೀಡೆಯ ಶ್ರೇಷ್ಠತೆ, ಗೌರವ ಮತ್ತು ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಮೇಜರ್ ಧ್ಯಾನಚಂದ ಅವರು ನಮಗೆಲ್ಲ ಸ್ಪೂರ್ತಿ ಎಂದರು.

ಕುಲಸಚಿವ ಸಿ.ನಾಗರಾಜು ಅವರು ಮಾತನಾಡಿ, ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಕ್ರೀಡಾ ಚಟುವಟಿಕೆಗಳನ್ನು ದಿನನಿತ್ಯದ ಭಾಗವಾಗಿ ಸ್ವೀಕರಿಸಬೇಕು. ಅಂದಾಗ ಮಾತ್ರ ಜೀವನ ಪರಿಪೂರ್ಣವಾಗುತ್ತದೆ ಎಂದರು.

ಇದೇ ವೇಳೆ ಅಖಿಲ ಭಾರತ ಮತ್ತು ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದ ವಿವಿಯ ಕ್ರೀಡಾಪಟುಗಳಿಗೆ ಗಣ್ಯರು ಪ್ರಶಸ್ತಿ ಪತ್ರಗಳನ್ನು ವಿತರಿಸಿದರು. ಕ್ರೀಡಾ ದಿನದ ಅಂಗವಾಗಿ ವಿಶ್ವವಿದ್ಯಾಲಯದ ಸಿಬ್ಬಂದಿಗೆ ಕ್ರೀಡಾಕೂಟ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ರಮೇಶ ಸವದಿ, ಡಾ.ಅರ್ಥೊಬ ನಾಯಕ, ಡಾ.ಅಮರೇಶ ನುಗಡೋಣಿ, ರಘುನಾಥ ಚಹ, ಡಾ.ಸಂಪತ ಕುಮಾರ, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ಮುಖ್ಯಸ್ಥ ಡಾ.ಶಶಿಧರ ಕೆಲ್ಲೂರ ಸೇರಿದಂತೆ ವಿಶ್ವವಿದ್ಯಾಲಯದ ಎಲ್ಲ ನಿಕಾಯಗಳ ಡೀನರು, ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande