ಸಸಿ ಕೊಳೆ ರೋಗ ನಿಯಂತ್ರಿಸಲು ಮುಂಜಾಗ್ರತಾ ಕ್ರಮ
ಬಳ್ಳಾರಿ, 30 ಆಗಸ್ಟ್ (ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿ ಮೆಣಸಿನಕಾಯಿ ಬೆಳೆ ಬೆಳೆಯುವ ರೈತರು ಮೆಣಸಿನಕಾಯಿ ಬೆಳೆಯಲ್ಲಿ ಸಸಿ ಕೊಳೆ ರೋಗ ಕಂಡುಬಂದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತೋಟಗಾರಿಕೆ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ತಿಳಿಸಿದ್ದಾರೆ. ಹವಾಮಾನ ಇಲಾಖೆಯ ಮುನ್ಸ
ಸಸಿ ಕೊಳೆ ರೋಗ ನಿಯಂತ್ರಿಸಲು ಮುಂಜಾಗ್ರತಾ ಕ್ರಮ


ಬಳ್ಳಾರಿ, 30 ಆಗಸ್ಟ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿ ಮೆಣಸಿನಕಾಯಿ ಬೆಳೆ ಬೆಳೆಯುವ ರೈತರು ಮೆಣಸಿನಕಾಯಿ ಬೆಳೆಯಲ್ಲಿ ಸಸಿ ಕೊಳೆ ರೋಗ ಕಂಡುಬಂದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತೋಟಗಾರಿಕೆ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ತಿಳಿಸಿದ್ದಾರೆ.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುವ ಸಂಭವವಿರುವುದರಿಂದ ಮಣ್ಣಿನಲ್ಲಿ ತೇವಾಂಶ ಹೆಚ್ಚಾಗಿ ಮೆಣಸಿನಕಾಯಿ ಬೆಳೆಯಲ್ಲಿ ಸಸಿ ಕೊಳೆಯುವ ರೋಗ ಕಾಣಿಸಿಕೊಳ್ಳುತ್ತದೆ. ಹಾಗಾಗಿ ರೈತರು ಕೆಳಕಂಡಂತೆ ಸೂಕ್ತ ಮುಂಜಾಗ್ರತೆ ಮತ್ತು ನಿರ್ವಹಣೆ ಕ್ರಮಗಳನ್ನು ಕೈಗೊಳ್ಳಬೇಕು ಎಂದಿದ್ದಾರೆ.

*ಕ್ರಮಗಳು:*

ರೈತರು ನರ್ಸರಿಯಿಂದ ಸಸಿಗಳನ್ನು ತಂದು ನಾಟಿ ಮಾಡುವಾಗ ಆಳವಾಗಿ ನಾಟಿ ಮಾಡುವುದು ಸೂಕ್ತವಲ್ಲ. ಬದಲಾಗಿ ಸಸಿಗಳನ್ನು ಸಾಲಿನಿಂದ ಸಾಲಿಗೆ 120 ಸೆಂ.ಮೀ ಹಾಗೂ ಗಿಡದಿಂದ ಗಿಡಕ್ಕೆ 60 ಸೆಂ.ಮೀ ಅಂತರದಲ್ಲಿ ನಾಟಿ ಮಾಡಿದಲ್ಲಿ ಗಿಡಗಳ ಬೆಳೆವಣಿಗೆ, ಗಾಳಿಯಾಡಲು ಸಹಾಯ ಮಾಡುತ್ತದೆ ಹಾಗೂ ರೋಗ ನಿಯಂತ್ರಣ ಮಾಡಬಹುದಾಗಿದೆ.

ಮಣ್ಣಿನಲ್ಲಿ ಅಧಿಕ ತೇವಾಂಶ ಬಸಿದು ಹೋಗುವಂತೆ ಬಸಿ ಕಾಲುವೆ ಮಾಡಬೇಕು. ನೀರಾವರಿಯನ್ನು ನಿಯಂತ್ರಿಸಿ ಮಣ್ಣಿನಲ್ಲಿ ಹೆಚ್ಚಿನ ತೇವಾಂಶ ಇಲ್ಲದೇ ಇರುವಂತೆ ನೋಡಿಕೊಳ್ಳಬೇಕು. ಮಣ್ಣಿನ ತೇವಾಂಶ ಹೆಚ್ಚಾಗಿ ಸಸಿ ಕೊಳೆಯುವ ರೋಗ ಕಂಡುಬಂದಲ್ಲಿ ಕಾರ್ಬನ್‍ಡೈಜಿಮ್ ಶೇ.50 ಡಬ್ಲ್ಯೂಪಿ ಅಥವಾ ಮ್ಯಾಂಕೋಜಬ್ ಶೇ.75 ಡಬ್ಲ್ಯೂಪಿ 2 ಗ್ರಾಂ ನಂತೆ ಅಥವಾ ಕಾಪರ್ ಆಕ್ಸಿಕೋಡ್ 4 ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪರಣೆ ಮಾಡುವುದರಿಂದ ರೋಗ ನಿಯಂತ್ರಣ ಹತೋಟಿಗೆ ಬರುತ್ತದೆ.

ಪ್ರತಿ ಎಕರೆಗೆ 100 ರಿಂದ 150 ಕೆ.ಜಿ ತಿಪ್ಪೆ ಗೊಬ್ಬರದ ಜೊತೆಯಲ್ಲಿ 5 ಕೆ.ಜಿ ಟ್ರೈಕೋಡರ್ಮ್ ಮಿಶ್ರಣ ಮಾಡಿ ಗಿಡಗಳ ಸಾಲಿನಲ್ಲಿ ಹಾಕುವುದು. ಸಸಿಗಳ ಸುತ್ತಲಿನ ಕಳೆಗಳನ್ನು ತೆಗೆದು ಹಾಕಬೇಕು. ಇದರಿಂದ ಗಾಳಿಯಾಡಲು ಅನುಕೂಲವಾಗುತ್ತದೆ. ಕೊಳೆರೋಗ ಸೋಂಕಿತ ಸಸಿ ಅಥವಾ ಸಸಿಗಳ ಭಾಗಗಳನ್ನು ತೆಗೆದು ಹಾಕಿ ಅವುಗಳನ್ನು ನಾಶಪಡಿಸಬೇಕು ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande