ಬಳ್ಳಾರಿ, 30 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ ಬೆಂಗಳೂರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬಳ್ಳಾರಿ ಮತ್ತು ಕೊಪ್ಪಳ ಸಹಯೋಗದೊಂದಿಗೆ ನಾಳೆ ಬೆಳಿಗ್ಗೆ 10 ಗಂಟೆಗೆ ನಗರದ ತಾಳೂರು ರಸ್ತೆಯ ಜಿಲ್ಲಾ ನ್ಯಾಯಾಲಯ ಸಂಕೀರ್ಣದ 1ನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ “ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ನ್ಯಾಯಾಂಗ ಅಧಿಕಾರಿಗಳು ಮತ್ತು ನ್ಯಾಯಾಧೀಶರಿಗೆ ಒಂದು ದಿನದ ಪುನಶ್ಚೇತನ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಹೈಕೋರ್ಟ್ ನ ನ್ಯಾಯಾಧೀಶರು ಹಾಗೂ ಬಳ್ಳಾರಿ ಜಿಲ್ಲೆಯ ಆಡಳಿತ ನ್ಯಾಯಾಧೀಶರೂ ಆಗಿರುವ ನ್ಯಾಯಮೂರ್ತಿ ಆರ್. ನಟರಾಜ್ ಅವರು ವರ್ಚುವಲ್ ಮೂಲಕ ಕಾರ್ಯಕ್ರಮ ಉದ್ಘಾಟಿಸುವರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ. ಶಾಂತಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಕೊಪ್ಪಳ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಚಂದ್ರಶೇಖರ್.ಸಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ ಬೆಂಗಳೂರಿನ ತರಬೇತುದಾರರಾದ ಗೀತಾದೇವಿ ಎಂ.ಪಾಪಣ್ಣ, ಮಧ್ಯಸ್ಥಿಕೆದಾರರಾದ ಜಯಕೀರ್ತಿ ಎಂ.ಸಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು.
ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್ ಎನ್.ಹೊಸಮನೆ, ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ್ ಎಸ್.ದರಗಡ್ ಸೇರಿದಂತೆ ಇತರೆ ನ್ಯಾಯಾಧೀಶರು ಉಪಸ್ಥಿತರಿರುವರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್