ನವದೆಹಲಿ, 30 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬಿಹಾರದಲ್ಲಿ ಲೋಕ ಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರ ಮತದಾರರ ಹಕ್ಕುಗಳ ಯಾತ್ರೆಗೆ ಜನರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.
ಈ ಯಾತ್ರೆ ಬಿಹಾರದ ಜನರಲ್ಲಿ ಹೊಸ ಭರವಸೆಯನ್ನು ಮೂಡಿಸಿದ್ದು, ಮತದಾನ ಹಕ್ಕಿನ ಮೇಲಿನ ಬೆದರಿಕೆಗೆ ವಿರುದ್ಧವಾಗಿ ಪ್ರಜಾಪ್ರಭುತ್ವದ ಸಂರಕ್ಷಣೆಗೆ ಪ್ರಮುಖ ಉಪಕ್ರಮವಾಗಿದೆ ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸನಲ್ಲಿ ತಿಳಿಸಿದ್ದಾರೆ.
ಒಟ್ಟು 25 ಜಿಲ್ಲೆಗಳು, 110 ವಿಧಾನ ಸಭಾ ಕ್ಷೇತ್ರಗಳನ್ನು ಒಳಗೊಂಡು, 1300 ಕಿಲೋಮೀಟರ್ ದೂರದಲ್ಲಿ ನಡೆದ ಈ ಯಾತ್ರೆಯಲ್ಲಿ ತಮಿಳುನಾಡು, ಕರ್ನಾಟಕ, ತೆಲಂಗಾಣ, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಹಾಗೂ ಅಖಿಲೇಶ್ ಯಾದವ್, ಪ್ರಿಯಾಂಕಾ ಗಾಂಧಿ ಸೇರಿ ಅನೇಕ ನಾಯಕರು ಭಾಗವಹಿಸಿದ್ದಾರೆ.
ಈ ಯಾತ್ರೆಯ ಅಂತ್ಯ ಪಾಟ್ನಾದ ಗಾಂಧಿ ಮೈದಾನದಿಂದ ಅಂಬೇಡ್ಕರ್ ಪಾರ್ಕ್‌ವರೆಗೆ ಬೃಹತ್ ಮೆರವಣಿಗೆಯೊಂದಿಗೆ ನಡೆಯಲಿದ್ದು, ಲಕ್ಷಾಂತರ ಜನರ ಮೇಲೆ ಪ್ರಭಾವ ಬೀರಲಿದೆ ಎಂದು ವೇಣುಗೋಪಾಲ್ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa