ಟಿಯಾಂಜಿನ್, 31 ಆಗಸ್ಟ್ (ಹಿ.ಸ.) :
ಆ್ಯಂಕರ್ : ಚೀನಾದ ಟಿಯಾಂಜಿನ್‌ನಲ್ಲಿ ಭಾನುವಾರದಿಂದ ಎರಡು ದಿನಗಳ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆ ಆರಂಭಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸಮ್ಮೇಳನದಲ್ಲಿ ಭಾಗವಹಿಸಲು ಆಗಮಿಸಿದ್ದು, ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.
ಈ ಶೃಂಗಸಭೆಯಲ್ಲಿ 20ಕ್ಕೂ ಹೆಚ್ಚು ರಾಷ್ಟ್ರಗಳು ಪಾಲ್ಗೊಂಡಿದ್ದು, ಜಾಗತಿಕ ಆರ್ಥಿಕ–ರಾಜಕೀಯ ಸಮತೋಲನದ ಹಿನ್ನೆಲೆಯಲ್ಲಿ ಇದು ಅತ್ಯಂತ ಮಹತ್ವದ್ದಾಗಿದೆ.
ಸಮ್ಮೇಳನದ ನಂತರ ಪ್ರಧಾನಿ ಮೋದಿ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಹಾಗೂ ಸೋಮವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಲಿದ್ದಾರೆ.
ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅವರು ಮೋದಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಯುದ್ಧ ಮತ್ತು ಶಾಂತಿ ಪ್ರಕ್ರಿಯೆಗಳ ಬಗ್ಗೆ ಚರ್ಚಿಸಿದ್ದಾರೆ.
ಗಾಲ್ವಾನ್ ಘಟನೆ ಬಳಿಕ ಭಾರತ–ಚೀನಾ ಸಂಬಂಧಗಳಲ್ಲಿ ಉದ್ವಿಗ್ನತೆ ಹೆಚ್ಚಿದ್ದರೂ ಇತ್ತೀಚೆಗೆ ಸಾಮಾನ್ಯಗೊಳಿಸುವ ಪ್ರಯತ್ನ ನಡೆಯುತ್ತಿದೆ.
ಅಮೆರಿಕದ ಏಕಪಕ್ಷೀಯ ಸುಂಕ ನೀತಿ ಹಿನ್ನೆಲೆಯಲ್ಲಿ SCO ರಾಷ್ಟ್ರಗಳ ಪರಸ್ಪರ ಸಹಕಾರ ಮತ್ತಷ್ಟು ಬಲ ಪಡೆಯಲಿದೆ ಎಂದು ನಿರೀಕ್ಷಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa